ADVERTISEMENT

ನಾಮಫಲಕಗಳಲ್ಲಿ ಶೇ 60ರಷ್ಟು ಕನ್ನಡ: ಕಾಯ್ದೆ ಜಾರಿ

​ಪ್ರಜಾವಾಣಿ ವಾರ್ತೆ
Published 26 ಫೆಬ್ರುವರಿ 2024, 15:22 IST
Last Updated 26 ಫೆಬ್ರುವರಿ 2024, 15:22 IST
ನಾಮಫಲಕದಲ್ಲಿ ಶೇ 60ರಷ್ಟು ಕನ್ನಡ ಬಳಸಬೇಕು ಎಂದು ಒತ್ತಾಯಿಸಿ ಕರ್ನಾಟಕ ಸೇನಾ ಪಡೆ ಸದಸ್ಯರು ನಗರ ಪಾಲಿಕೆ ಮುಂಭಾಗ ಗುರುವಾರ ಪ್ರತಿಭಟಿಸಿದರು –ಪ್ರಜಾವಾಣಿ ಚಿತ್ರ
ನಾಮಫಲಕದಲ್ಲಿ ಶೇ 60ರಷ್ಟು ಕನ್ನಡ ಬಳಸಬೇಕು ಎಂದು ಒತ್ತಾಯಿಸಿ ಕರ್ನಾಟಕ ಸೇನಾ ಪಡೆ ಸದಸ್ಯರು ನಗರ ಪಾಲಿಕೆ ಮುಂಭಾಗ ಗುರುವಾರ ಪ್ರತಿಭಟಿಸಿದರು –ಪ್ರಜಾವಾಣಿ ಚಿತ್ರ   

ಬೆಂಗಳೂರು: ಕೈಗಾರಿಕೆ, ವಾಣಿಜ್ಯ ಸಂಸ್ಥೆಗಳು, ವಹಿವಾಟು ಕೇಂದ್ರಗಳು, ಉದ್ದಿಮೆಗಳ ನಾಮಫಲಕಗಳಲ್ಲಿ ಶೇಕಡ 60ರಷ್ಟು ಕನ್ನಡ ಭಾಷೆ ಇರದಿದ್ದರೆ, ಕ್ರಮ ಜರುಗಿಸುವ ಅಧಿಕಾರ ಸರ್ಕಾರಕ್ಕೆ ಒದಗಿದೆ.

ಈ ಉದ್ದೇಶಕ್ಕೆ, ರಾಜ್ಯ ಸರ್ಕಾರ ಮಂಡಿಸಿ, ಉಭಯ ಸದನಗಳಲ್ಲೂ ಅನುಮೋದನೆ ಪಡೆದಿದ್ದ ‘ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ (ತಿದ್ದುಪಡಿ) ಮಸೂದೆ 2024’ಕ್ಕೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ. ಅದರ ಬೆನ್ನಲ್ಲೇ, ಕರ್ನಾಟಕ ರಾಜ್ಯಪತ್ರದಲ್ಲಿ ಅಧಿಸೂಚನೆಯನ್ನೂ ಹೊರಡಿಸಲಾಗಿದೆ.

ಸರ್ಕಾರ ಅಥವಾ ಸ್ಥಳೀಯ ಪ್ರಾಧಿಕಾರಗಳಿಂದ ಅನುಮತಿ, ಮಂಜೂರಾತಿ ಪಡೆದ ಎಲ್ಲ ಸಂಸ್ಥೆಗಳಿಗೂ ಇದು ಅನ್ವಯವಾಗಲಿದೆ. ಆಸ್ಪತ್ರೆಗಳು, ಪ್ರಯೋಗಾಲಯಗಳು, ಮನೋರಂಜನಾ ಕೇಂದ್ರಗಳು, ಹೊಟೇಲ್‌ಗಳ ನಾಮಫಲಕಗಳ ಮೇಲ್ಭಾಗದಲ್ಲಿ ಕನ್ನಡ ಭಾಷೆಯನ್ನು ಶೇ 60ರಷ್ಟು ಪ್ರದರ್ಶಿಸಬೇಕು.

ADVERTISEMENT

‘ನಾಮಫಲಕಗಳಲ್ಲಿ ಕನ್ನಡ ಕಡ್ಡಾಯಗೊಳಿಸಬೇಕು’ ಎಂದು ಕೆಲ ತಿಂಗಳ ಹಿಂದೆ ಕನ್ನಡಪರ ಸಂಘಟನೆಗಳು ಬೆಂಗಳೂರಿನಲ್ಲಿ ಹೋರಾಟ ನಡೆಸಿದ್ದವು. ಫೆಬ್ರುವರಿ 28ರೊಳಗೆ ಕಾಯ್ದೆ ಅನುಷ್ಠಾನಗೊಳಿಸುವುದಾಗಿ ಸರ್ಕಾರ ಹೋರಾಟಗಾರರಿಗೆ ಭರವಸೆ ನೀಡಿತ್ತು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.