ಬೆಂಗಳೂರು: ರಾಜ್ಯದಲ್ಲಿ ಲಿಥಿಯಂ– ಐಯಾನ್ ಸೆಲ್ ಉತ್ಪಾದನೆಗಾಗಿ ₹ 6,000 ಕೋಟಿ ಬಂಡವಾಳ ಹೂಡಿಕೆ ಮಾಡಲುಎಕ್ಸೈಡ್ ಇಂಡಸ್ಟ್ರೀಸ್ ಮುಂದಾಗಿದೆ.
ಈ ಸಂಬಂಧ ಗುರುವಾರ ಬೆಂಗಳೂರಿನ ಕರ್ನಾಟಕ ಉದ್ಯೋಗ ಮಿತ್ರ ಕಚೇರಿಯಲ್ಲಿಎಕ್ಸೈಡ್ ಇಂಡಸ್ಟ್ರೀಸ್ ವ್ಯವಸ್ಥಾಪಕ ನಿರ್ದೇಶಕ ಸುಬೀರ್ ಚಕ್ರವರ್ತಿ ಅವರು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ ನಿರಾಣಿ ಅವರನ್ನು ಭೇಟಿ ಮಾತುಕತೆ ನಡೆಸಿದರು.
ಎಕ್ಸೈಡ್ ಇಂಡಸ್ಟ್ರೀಸ್ ಬಂಡವಾಳ ಹೂಡಿಕೆ ಮಾಡುತ್ತಿರುವ ಪರಿಣಾಮ ರಾಜ್ಯದಲ್ಲಿ ಒಟ್ಟು 1200 ರಿಂದ 1400 ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ನಿರೀಕ್ಷೆ ಇದೆ. ಇದು ಸುಧಾರಿತ ಕೋಶ ರಸಾಯನ ಶಾಸ್ತ್ರ ತಂತ್ರಜ್ಞಾನಕ್ಕಾಗಿ ಭಾರತದ ಅತಿ ದೊಡ್ಡ ಗಿಗಾ ಕಾರ್ಖಾನೆಗಳಲ್ಲಿ ಒಂದಾಗಿದೆ ಎಂದು ಚಕ್ರವರ್ತಿ ಹೇಳಿದರು.
ಎಕ್ಸೈಡ್ ಇಂಡಸ್ಟ್ರೀಸ್ ಕೆಂಪೇಗೌಡ ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿಯ ಹರಳೂರು ಕೈಗಾರಿಕಾ ಪ್ರದೇಶದಲ್ಲಿ 80 ಎಕರೆ ಭೂಮಿಯನ್ನು ಕೇಳಿದೆ. ಕಂಪನಿಗೆ ಸರ್ಕಾರದ ವತಿಯಿಂದ ಎಲ್ಲ ರೀತಿಯ ಸಹಕಾರ ನೀಡುವುದಾಗಿ ಸಚಿವ ನಿರಾಣಿ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.