ADVERTISEMENT

ನವದೆಹಲಿಯಲ್ಲಿ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ

​ಪ್ರಜಾವಾಣಿ ವಾರ್ತೆ
Published 26 ಜೂನ್ 2024, 0:51 IST
Last Updated 26 ಜೂನ್ 2024, 0:51 IST
ಮಹೇಶ ಜೋಶಿ
ಮಹೇಶ ಜೋಶಿ   

ಬೆಂಗಳೂರು: ನವದೆಹಲಿಯಲ್ಲಿ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಆಯೋಜಿಸಲು ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಣಿಯಲ್ಲಿ ತೀರ್ಮಾನಿಸಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಹೇಶ ಜೋಶಿ ತಿಳಿಸಿದ್ದಾರೆ.

ರಾಜ್ಯದ ಸಂಸದರು ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿರುವುದಕ್ಕೆ ಅಭಿನಂದಿಸಿರುವ ಅವರು, ಈ ಬಗ್ಗೆ ತಿಳಿಸಿದ್ದಾರೆ.

87ನೇ ಸಾಹಿತ್ಯ ಸಮ್ಮೇಳನ ಡಿ.20ರಿಂದ 22ರವರೆಗೆ ಮಂಡ್ಯದಲ್ಲಿ ನಡೆಯಲಿದೆ. ಪ್ರತಿ ಬಾರಿ ಸಾಹಿತ್ಯ ಸಮ್ಮೇಳನದ ಅವಧಿಯಲ್ಲಿ ಕಾರ್ಯಕಾರಿಣಿ ಸಭೆ ನಡೆಸಿ, ಮುಂದಿನ ಸಮ್ಮೇಳನದ ಆತಿಥ್ಯವನ್ನು ನಿರ್ಧರಿಸಲಾಗುತ್ತಿತ್ತು. ಆದರೆ, ಈ ಬಾರಿ ಈಗಾಗಲೇ ಮುಂದಿನ ಸಮ್ಮೇಳನವನ್ನು ನವದೆಹಲಿಯಲ್ಲಿ ನಡೆಸುವುದಾಗಿ ತಿಳಿಸಿ, ಸಮ್ಮೇಳನಕ್ಕೆ ರಾಜ್ಯದ ಸಂಸದರು ಸಂಪೂರ್ಣ ಸಹಕಾರ ನೀಡಬೇಕೆಂದು ಮನವಿ ಮಾಡಿದ್ದಾರೆ.

ADVERTISEMENT

‘ಸಂಸದರ ಕನ್ನಡ ಪ್ರೇಮವು ಪ್ರಮಾಣ ವಚನ ಸ್ವೀಕಾರಕ್ಕೆ ಮಾತ್ರ ಸೀಮಿತವಾಗದೆ, ಸಂಸದೀಯ ವ್ಯವಹಾರಕ್ಕೂ ಅನ್ವಯವಾಗಲಿ’ ಎಂದು ಪ್ರಕಟಣೆಯಲ್ಲಿ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.