ADVERTISEMENT

ರಾಜ್ಯದಲ್ಲಿ ಕಳೆದ 5 ವರ್ಷಗಳಲ್ಲಿ 9,018 ಮಕ್ಕಳು ನಾಪತ್ತೆ!

​ಪ್ರಜಾವಾಣಿ ವಾರ್ತೆ
Published 20 ಫೆಬ್ರುವರಿ 2023, 22:15 IST
Last Updated 20 ಫೆಬ್ರುವರಿ 2023, 22:15 IST
   

ಬೆಂಗಳೂರು: ‘ರಾಜ್ಯದಲ್ಲಿ ಕಳೆದ ಐದು ವರ್ಷಗಳಲ್ಲಿ 9,018 ಮಕ್ಕಳ ನಾಪತ್ತೆ ಮತ್ತು ಅಪಹರಣ ಪ್ರಕರಣಗಳು ದಾಖಲಾಗಿವೆ’ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.

ವಿಧಾನ ಪರಿಷತ್‌ನಲ್ಲಿ ಸೋಮವಾರ ಪ್ರಶ್ನೋತ್ತರ ವೇಳೆಯಲ್ಲಿ ಜೆಡಿಎಸ್‌ನ ಗೋವಿಂದರಾಜು ಅವರ ಪ್ರಶ್ನೆಗೆ ಉತ್ತರಿಸಿದ ಅವರು, ‘ಈ ಹಿಂದೆ ನಾಪತ್ತೆ ಮತ್ತು ಅಪಹರಣ ಪ್ರಕರಣ ವರದಿಯೇ ಆಗುತ್ತಿರಲಿಲ್ಲ. ಮಕ್ಕಳ ಮೇಲಿನ ಅಪರಾಧ ಪ್ರಕರಣಗಳ ಅಂಕಿ ಅಂಶಗಳನ್ನು ವಿಶ್ಲೇಷಿಸಿದರೆ ಸರಾಸರಿ ಶೇ 10ರಿಂದ 20ರಷ್ಟು ಹೆಚ್ಚಾಗಿದೆ’ ಎಂದರು.

‘ಐದು ವರ್ಷಗಳಲ್ಲಿ 12,592 ಪೋಕ್ಸೊ ಪ್ರಕರಣಗಳು ಸಹ ವರದಿಯಾಗಿವೆ. ಅತ್ಯಾಚಾರ, ಪೋಕ್ಸೊ ಪ್ರಕರಣಗಳ ತನಿಖೆಯನ್ನು 60 ದಿನಗಳ ಕಾಲಮಿತಿಯಲ್ಲಿ ತನಿಖೆಯನ್ನು ಪೂರ್ಣಗೊಳಿಸಲು ನಿರ್ದೇಶನ ನೀಡಲಾಗಿದೆ’ ಎಂದು ತಿಳಿಸಿದರು.

ADVERTISEMENT

‘ಈಗ ಪ್ರತಿ ಠಾಣೆಯಲ್ಲೂ ಕನಿಷ್ಠ ಮೂವರು ಮಹಿಳಾ ಕಾನ್‌ಸ್ಟೆಬಲ್‌ಗಳಿದ್ದಾರೆ. ನಿರ್ಭಯಾ ನಿಧಿ ಅಡಿಯಲ್ಲಿ ₹500 ಕೋಟಿ ವೆಚ್ಚದಲ್ಲಿ 3,200 ಸ್ಥಳಗಳಲ್ಲಿ 7500 ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸುವ ಉದ್ದೇಶ ಹೊಂದಲಾಗಿದೆ. ಈಗಾಗಲೇ 4000 ಸಿಸಿಟಿವಿ ಕ್ಯಾಮೆರಾಗಳನ್ನು ಅಳಡಿಸಲಾಗಿದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.