ಬೆಂಗಳೂರು: ರಾಜ್ಯದ ವಿವಿಧ ಐಟಿಐಗಳಲ್ಲಿ ವ್ಯಾಸಂಗ ಮಾಡಿದ್ದ 91ವಿದ್ಯಾರ್ಥಿಗಳುಉದ್ಯೋಗಕ್ಕಾಗಿ ನಕಲಿ ದಾಖಲೆಗಳನ್ನು ಸಲ್ಲಿಸಿರುವುದು ದಾಖಲೆಗಳ ಪರಿಶೀಲನೆ ವೇಳೆ ದೃಢಪಟ್ಟಿದೆ.
ಈ ಸಂಬಂಧ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಆಯುಕ್ತಾಲಯದ ಜಂಟಿ ನಿರ್ದೇಶಕ ಬಿ.ಎಲ್.ಚಂದ್ರಶೇಖರ್ ಅವರು ಇದೇ 23ರಂದು ನಗರದ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
‘ರಾಜ್ಯದ ವಿವಿಧೆಡೆಯಲ್ಲಿರುವ ಸರ್ಕಾರಿ ಏಜೆನ್ಸಿಗಳ ಮೂಲಕ 2017–18ನೇ ಸಾಲಿನಲ್ಲಿ ಸಾವಿರಾರು ಮಂದಿ ಉದ್ಯೋಗ ಬಯಸಿ ಅರ್ಜಿಗಳನ್ನು ಸಲ್ಲಿಸಿದ್ದರು. ಇವುಗಳ ಪರಿಶೀಲನೆಗಾಗಿ 2017ರ ಸೆಪ್ಟೆಂಬರ್ 12, 2018ರ ಜನವರಿ 31 ಹಾಗೂ ಜೂನ್ 23 ರಂದು ಸಮಿತಿಗಳನ್ನು ರಚಿಸಲಾಗಿತ್ತು. ಸಮಿತಿಯು ತನ್ನ ವರದಿಯನ್ನು ಸಲ್ಲಿಸಿದ್ದು, ಒಟ್ಟು 91 ಮಂದಿ ನಕಲಿ ದಾಖಲೆಗಳನ್ನು ನೀಡಿರುವುದನ್ನು ಪತ್ತೆಹಚ್ಚಿದೆ ಎಂದು ಅವರು ದೂರಿನಲ್ಲಿ ವಿವರಿಸಿದ್ದಾರೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.
‘ಎಲ್ಲಾ ವಿದ್ಯಾರ್ಥಿಗಳಿಗೂ ಸಮನ್ಸ್ ನೀಡಲಾಗಿದೆ. ನಕಲಿ ದಾಖಲೆಗಳನ್ನು ಪಡೆದಿದ್ದು ಹೇಗೆ ಎಂಬುದರ ಕುರಿತು ವಿಚಾರಣೆ ನಡೆಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.