ADVERTISEMENT

ಲೋಕಸಭೆ ಚುನಾವಣೆ ಫಲಿತಾಂಶ ಪರಾಮರ್ಶೆಗೆ ಸಲೀಂ ಅಹಮದ್‌ ನೇತೃತ್ವದಲ್ಲಿ ಸಮಿತಿ

​ಪ್ರಜಾವಾಣಿ ವಾರ್ತೆ
Published 14 ಆಗಸ್ಟ್ 2024, 15:58 IST
Last Updated 14 ಆಗಸ್ಟ್ 2024, 15:58 IST
<div class="paragraphs"><p>ಸಲೀಂ ಅಹಮದ್‌&nbsp;</p></div>

ಸಲೀಂ ಅಹಮದ್‌ 

   

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಕಲಬುರಗಿ ವಿಭಾಗದಲ್ಲಿ ಕಾಂಗ್ರೆಸ್‌ ಪಕ್ಷದ ಸಾಧನೆಯನ್ನು ಪರಾಮರ್ಶೆ ನಡೆಸಲು ವಿಧಾನಪರಿಷತ್‌ನ ಸರ್ಕಾರದ ಮುಖ್ಯ ಸಚೇತಕ  ಸಲೀಂ ಅಹಮದ್‌ ನೇತೃತ್ವದಲ್ಲಿ ಸತ್ಯಶೋಧನಾ ಸಮಿತಿಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ ರಚಿಸಿದ್ದಾರೆ.

ಸಮಿತಿಗೆ ವಿಧಾನ ಪರಿಷತ್‌ ‌ಮಾಜಿ ಸದಸ್ಯ ಎಂ. ನಾರಾಯಣಸ್ವಾಮಿ ಸಂಚಾಲಕರಾಗಿರುತ್ತಾರೆ. ರಾಜ್ಯಸಭೆ ಮಾಜಿ ಸದಸ್ಯ ಎಲ್‌. ಹನುಮಂತಯ್ಯ, ಶಾಸಕರಾದ ಬಿ.ಜಿ. ಗೋವಿಂದಪ್ಪ, ಮಹಾಂತೇಶ ಕೌಜಲಗಿ, ಕೆ. ಷಡಕ್ಷರಿ, ಜಿ.ಎಚ್. ಶ್ರೀನಿವಾಸ್, ಶ್ರೀನಿವಾಸ ಮಾನೆ, ಪರಿಷತ್‌ ಸದಸ್ಯರಾದ ಅಬ್ದುಲ್‌ ಜಬ್ಬಾರ್, ಉಮಾಶ್ರೀ, ಯು.ಬಿ. ವೆಂಕಟೇಶ್‌, ಸುಧಾಮ್‌ ದಾಸ್‌, ಕೆಪಿಸಿಸಿ ಮಾಜಿ ಕಾರ್ಯದರ್ಶಿ ಅಮರನಾಥ್‌ ಸದಸ್ಯರು.

ADVERTISEMENT

ಬೀದರ್‌, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ ಜಿಲ್ಲೆಗಳಲ್ಲಿ ಪಕ್ಷದ ನಾಯಕರನ್ನು ಭೇಟಿ ಮಾಡಿ, ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಸಾಧನೆಗೆ ಕಾರಣವಾದ ಅಂಶಗಳನ್ನು ಈ ಸಮಿತಿ ಪಟ್ಟಿ ಮಾಡಿ ಕೆಪಿಸಿಸಿಗೆ ವರದಿ ನೀಡಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.