ADVERTISEMENT

ದ್ವಿತೀಯ ಪಿಯುಸಿ ಪುನರಾವರ್ತಿತ ಅಭ್ಯರ್ಥಿಗಳ ತೇರ್ಗಡೆ: ಸುರೇಶ್‌ಕುಮಾರ್‌

​ಪ್ರಜಾವಾಣಿ ವಾರ್ತೆ
Published 5 ಜುಲೈ 2021, 19:58 IST
Last Updated 5 ಜುಲೈ 2021, 19:58 IST
ಎಸ್‌.ಸುರೇಶ್‌ ಕುಮಾರ್
ಎಸ್‌.ಸುರೇಶ್‌ ಕುಮಾರ್   

ಬೆಂಗಳೂರು: ‘ಪ್ರಸಕ್ತ ಸಾಲಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಗೆ ನೋಂದಾಯಿಸಿಕೊಂಡಿರುವ ಪುನರಾವರ್ತಿತ ಅಭ್ಯರ್ಥಿಗಳನ್ನು ಕೂಡಾ ಉತ್ತೀರ್ಣಗೊಳಿಸಲು ನಿರ್ಧರಿಸಲಾಗಿದೆ’ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್‌ಕುಮಾರ್‌ ತಿಳಿಸಿದ್ದಾರೆ.

‘ಪುನರಾವರ್ತಿತ ಅಭ್ಯರ್ಥಿಗಳನ್ನೂ ಉತ್ತೀರ್ಣಗೊಳಿಸಬೇಕೆಂದು ಕೆಲವರು ಹೈಕೋರ್ಟ್ ಮೊರೆ ಹೋಗಿದ್ದರು. ಹೀಗಾಗಿ ಪುನರಾವರ್ತಿತ ಅಭ್ಯರ್ಥಿಗಳನ್ನೂ ಈ ವರ್ಷದ ಮಟ್ಟಿಗೆ ಉತ್ತೀರ್ಣಗೊಳಿಸಲು ನಿರ್ಧರಿಸಿರುವ ಬಗ್ಗೆ ನ್ಯಾಯಾಲಯದ ಗಮನಕ್ಕೆ ತರಲಾಗಿದೆ. ಸರ್ಕಾರದ ಈ ನಿಲುವನ್ನು ಹೈಕೋರ್ಟ್ ಸಮ್ಮತಿಸಿದೆ’ ಎಂದು ಅವರು ವಿವರಿಸಿದ್ದಾರೆ.

ದ್ವಿತೀಯ ಪಿಯುಸಿ ತೇರ್ಗಡೆ: ಅಂಕ ನಿಗದಿ ಹೇಗೆ: ಎಸ್ಸೆಸ್ಸೆಲ್ಸಿ ಮತ್ತು ಪ್ರಥಮ ಪಿಯುಸಿಯ ತಲಾ ಶೇ 45ರಷ್ಟು ಅಂಕ, ದ್ವಿತೀಯ ಪಿಯುಸಿ ಶೈಕ್ಷಣಿಕ ಚಟುವಟಿಕೆಗೆ ಶೇ 10 ಮತ್ತು ಪ್ರಥಮ ಪಿಯುಸಿಯಲ್ಲಿ ಪಡೆದ ಅಂಕಗಳಿಗೆ ಶೇ 5 ಕೃಪಾಂಕ ನೀಡಲಾಗುವುದು.

ADVERTISEMENT

ಪುನರಾವರ್ತಿತ ವಿದ್ಯಾರ್ಥಿಗಳಿಗೆ ಕನಿಷ್ಠ ಉತ್ತೀರ್ಣ ಅಂಕಗಳನ್ನು ಮತ್ತು ಶೇ 5ರಷ್ಟು ಕೃಪಾಂಕ ನೀಡಿ ಫಲಿತಾಂಶ ಘೋಷಿಸಲು ಶಿಕ್ಷಣ ಇಲಾಖೆ ನಿರ್ಧರಿಸಿದೆ.ಈ ವರ್ಷ ದ್ವಿತೀಯ ಪಿಯುಸಿ ಪರೀಕ್ಷೆ ತೆಗೆದುಕೊಳ್ಳುವ ಖಾಸಗಿ ಅಭ್ಯರ್ಥಿಗಳಿಗೆ ಮುಂದಿನ ದಿನಗಳಲ್ಲಿ ಪರೀಕ್ಷೆ ನಡೆಸಿ ಫಲಿತಾಂಶ ನೀಡಲು ಕೂಡಾ ಇಲಾಖೆ ತೀರ್ಮಾನಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.