ನವದೆಹಲಿ: ಪಶ್ಚಿಮ ಘಟ್ಟ ಸೂಕ್ಷ್ಮ ಪ್ರದೇಶ. ಅದರ ಧಾರಣಾ ಶಕ್ತಿಯ ಅಧ್ಯಯನ ನಡೆಸಿದ ನಡೆಸಿದ ಬಳಿಕವಷ್ಟೇ ಅಭಿವೃದ್ಧಿ ಯೋಜನೆಗಳನ್ನು ಕೈಗೆತ್ತಿಕೊಳ್ಳಬೇಕು ಎಂದು ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಸಲಹೆ ನೀಡಿದರು.
ಲೋಕಸಭೆಯಲ್ಲಿ ನಿಯಮ 197ರ ಅಡಿಯಲ್ಲಿ ಶಿರೂರು ಗುಡ್ಡ ಕುಸಿತದ ಕುರಿತು ಬುಧವಾರ ಪ್ರಸ್ತಾಪಿಸಿದ ಅವರು, ‘ಅಭಿವೃದ್ಧಿ ಆಗಬೇಕು ನಿಜ. ಆದರೆ, ವೈಜ್ಞಾನಿಕ ಅಧ್ಯಯನ ನಡೆಸಿ ಅಭಿವೃದ್ಧಿ ಯೋಜನೆಗಳನ್ನು ಕೈಗೆತ್ತಿಕೊಳ್ಳಬೇಕು’ ಎಂದರು.
‘ಉತ್ತರ ಕನ್ನಡದ ಶಿರೂರಿನಲ್ಲಿ ಭೂಕುಸಿತ ಸಂಭವಿಸಿ ಎಂಟು ಜನರು ಸತ್ತರು ಹಾಗೂ ಮೂವರು ನಾಪತ್ತೆಯಾದರು. ದುರ್ಘಟನೆಯ ಸ್ಥಳಕ್ಕೆ ಪ್ರಧಾನಿ, ಗೃಹ ಸಚಿವರು ಹಾಗೂ ರಕ್ಷಣಾ ಸಚಿವರು ತಕ್ಷಣ ಸೈನ್ಯ ಕಳುಹಿಸಿದ್ದಾರೆ. ಎನ್‌ಡಿಆರ್‌ಎಫ್ ಹಾಗೂ ಸೀಬರ್ಡ್ ಅಧಿಕಾರಿಗಳು ನಾಪತ್ತೆಯಾದವರ ಹುಡುಕುವ ಕೆಲಸವನ್ನು ಸಮರ್ಥವಾಗಿ ಮಾಡುತ್ತಿದ್ದಾರೆ. ರಾಷ್ಟ್ರೀಯ ಹೆದ್ದಾರಿಯ ಪ್ರಾಧಿಕಾರದ ಅವೈಜ್ಞಾನಿಕ ಕಾಮಗಾರಿಯಿಂದಾಗಿ ಈ ದುರ್ಘಟನೆ ಸಂಭವಿಸಿದೆ. ನಾಪತ್ತೆಯಾದವರ ಪತ್ತೆ ಹಚ್ಚಲು ಇನ್ನೊಂದು ಎನ್‌ಡಿಆರ್‌ಎಫ್ ತಂಡ ಕಳುಹಿಸಬೇಕು. ಮೃತಪಟ್ಟವರ ಕುಟುಂಬಕ್ಕೆ ಪ್ರಧಾನಿ ಪರಿಹಾರ ನಿಧಿಯಿಂದ ಪರಿಹಾರ ನೀಡಬೇಕು’ ಎಂದು ಅವರು ಆಗ್ರಹಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.