ಬೆಂಗಳೂರು: ‘ವಕ್ಫ್ ಮಂಡಳಿಯಿಂದ ಪ್ರತಿ ಜಿಲ್ಲೆಯಲ್ಲೂ ಒಂದೊಂದು ಮಹಿಳಾ ಕಾಲೇಜು ಸ್ಥಾಪನೆ ಮಾಡಲಾಗುವುದು’ ಎಂದು ಅಲ್ಪಸಂಖ್ಯಾತರ ಕಲ್ಯಾಣ ಮತ್ತು ವಕ್ಫ್ ಸಚಿವ ಬಿ.ಜೆಡ್. ಜಮೀರ್ ಅಹಮದ್ ಖಾನ್ ಹೇಳಿದರು.
ಹಜ್ ಭವನದಲ್ಲಿ ಶನಿವಾರ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ 100 ಮದರಸಾಗಳಲ್ಲಿ ಔಪಚಾರಿಕ ಶಿಕ್ಷಣ ಉಪಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ‘ರಾಜ್ಯದಲ್ಲಿ ಈ ಹಿಂದೆ ಹಿಜಾಬ್ ವಿವಾದ ತಲೆದೋರಿತ್ತು. ಇದರಿಂದ ಆತಂಕಗೊಂಡಿದ್ದ ಮುಸ್ಲಿಂ ಸಮುದಾಯದ ಹೆಣ್ಣುಮಕ್ಕಳು ಉನ್ನತ ಶಿಕ್ಷಣದಿಂದ ದೂರ ಸರಿದಿದ್ದರು. ಅವರನ್ನು ಮರಳಿ ಉನ್ನತ ಶಿಕ್ಷಣಕ್ಕೆ ತರುವ ಉದ್ದೇಶದಿಂದ ಜಿಲ್ಲಾ ಮಟ್ಟದಲ್ಲಿ ಕಾಲೇಜು ಸ್ಥಾಪನೆ ನಿರ್ಧಾರ ತೆಗೆದುಕೊಳ್ಳಲಾಗಿದೆ’ ಎಂದರು.
ಕಾರ್ಯಕ್ರಮದಲ್ಲಿ 15 ಕಾಲೇಜುಗಳ ಸ್ಥಾಪನೆಗೆ ಸಾಂಕೇತಿಕವಾಗಿ ಶಂಕುಸ್ಥಾಪನೆ ನೆರವೇರಿಸಿದ ಅವರು, ‘ಈ ಕಾಲೇಜುಗಳನ್ನು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ನಡೆಸಲಾಗುತ್ತದೆ. ನಮ್ಮ ಸರ್ಕಾರ ಬಂದ ಮೇಲೆ ಇಲಾಖೆಯ ಒಟ್ಟು ಬಜೆಟ್‌ನಲ್ಲಿ ಶೇ 65–ಶೇ70ರಷ್ಟು ಅನುದಾನವನ್ನು ಶಿಕ್ಷಣ ಮತ್ತು ಆರೋಗ್ಯಕ್ಕೆ ವಿನಿಯೋಗ ಮಾಡಲಾಗುತ್ತಿದೆ’ ಎಂದರು.
ಕಾರ್ಯಕ್ರಮದಲ್ಲಿ 26 ಜಿಲ್ಲೆಗಳಿಗೆ ಆಂಬುಲೆನ್ಸ್ ಮತ್ತು ಎಲ್ಲ ತಾಲ್ಲೂಕುಗಳಿಗೆ ಫ್ರೀಜರ್ ಬಾಕ್ಸ್‌ಗಳನ್ನು ವಿತರಿಸಲಾಯಿತು. ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಪಾಲ್ಗೊಂಡಿದ್ದರು.
ನರೇಂದ್ರ ಮೋದಿ ಅವರ ಸರ್ಕಾರವು ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ಇಡೀ ದೇಶಕ್ಕೆಂದು ₹3000 ಕೋಟಿ ಇಟ್ಟಿದೆ. ಸಿದ್ದರಾಮಯ್ಯ ಸರ್ಕಾರ ₹3200 ಕೋಟಿ ನೀಡಿದೆಜಮೀರ್ ಅಹಮದ್ ಖಾನ್ ಅಲ್ಪಸಂಖ್ಯಾತ ಕಲ್ಯಾಣ ಸಚಿವ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.