ADVERTISEMENT

ಗೃಹ ಸಚಿವ ಆರಗ ಮನೆಗೆ ಎಬಿವಿಪಿ ಮುತ್ತಿಗೆ: ಪಿಎಸ್‌ಐ, ಹೆಡ್ ಕಾನ್‌ಸ್ಟೆಬಲ್ ಅಮಾನತು

​ಪ್ರಜಾವಾಣಿ ವಾರ್ತೆ
Published 30 ಜುಲೈ 2022, 13:54 IST
Last Updated 30 ಜುಲೈ 2022, 13:54 IST
ಆರಗ ಜ್ಞಾನೇಂದ್ರ
ಆರಗ ಜ್ಞಾನೇಂದ್ರ   

ಬೆಂಗಳೂರು: ಗೃಹ ಸಚಿವ ಆರಗ ಜ್ಞಾನೇಂದ್ರ ಮನೆಗೆ ಎಬಿವಿಪಿ ಕಾರ್ಯಕರ್ತರು ಮುತ್ತಿಗೆ ಹಾಕಿದ್ದ ಪ್ರಕರಣ ಸಂಬಂಧ, ಜೆ.ಸಿ.ನಗರ ಠಾಣೆ ಪಿಎಸ್‌ಐ ರಾಜೇಸಾಬ್ ಹಾಗೂ ಹೆಡ್ ಕಾನ್‌ಸ್ಟೆಬಲ್ ಶ್ರೀನಿವಾಸ್ ಮೂರ್ತಿ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.

ಜಯಮಹಲ್ ಬಳಿಯ ಆರಗ ಜ್ಞಾನೇಂದ್ರ ಅವರ ಸರ್ಕಾರಿ ನಿವಾಸಕ್ಕೆ ಎಬಿವಿಪಿ ಕಾರ್ಯಕರ್ತರು ಶನಿವಾರ ಬೆಳಿಗ್ಗೆ ಮುತ್ತಿಗೆ ಹಾಕಿದ್ದರು. ತ್ವರಿತ ಕ್ರಮ ಕೈಗೊಳ್ಳಬೇಕಾದ ಪಿಎಸ್‌ಐ ಹಾಗೂ ಹೆಡ್ ಕಾನ್‌ಸ್ಟೆಬಲ್ ಕರ್ತವ್ಯಲೋಪ ಎಸಗಿದ್ದರು. ಈ ಬಗ್ಗೆ ಪ್ರಾಥಮಿಕ ತನಿಖೆ ನಡೆಸಿದ ಉತ್ತರ ವಿಭಾಗದ ಡಿಸಿಪಿ ವಿನಾಯಕ್ ಪಾಟೀಲ, ಇಬ್ಬರನ್ನೂ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

‘ಜೆ.ಸಿ.ನಗರ ಠಾಣೆ ಇನ್‌ಸ್ಪೆಕ್ಟರ್‌ ವರ್ಗಾವಣೆ ಆಗಿದ್ದು, ಸದ್ಯ ಈ ಹುದ್ದೆ ಖಾಲಿ ಇದೆ. ಪಿಎಸ್‌ಐ ರಾಜೇಸಾಬ್ ಅವರಿಗೆ ಪ್ರಭಾರಿಯಾಗಿ ಠಾಣಾಧಿಕಾರಿ ಜವಾಬ್ದಾರಿ ನೀಡಲಾಗಿತ್ತು. ಆದರೆ, ಇವರು ತ್ವರಿತವಾಗಿ ಸ್ಥಳಕ್ಕೆ ಹೋಗದಿರುವುದರಿಂದ ಪ್ರತಿಭಟನೆ ತೀವ್ರ ರೂಪ ಪಡೆಯಿತು’ ಎಂದೂ ಹೇಳಲಾಗುತ್ತಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.