ಮಂಗಳೂರು: ‘ಕುದುರೆಮುಖ ರಾಷ್ಟ್ರೀಯ ಉದ್ಯಾನ ವ್ಯಾಪ್ತಿಯಲ್ಲಿ ವಾಸಿಸುವ ಬೆಳ್ತಂಗಡಿ ತಾಲ್ಲೂಕಿನ ಕುತ್ಲೂರು ಗ್ರಾಮದ ಕುಟುಂಬಗಳಿಗೆ ಮೂಲಸೌಕರ್ಯ ಕಲ್ಪಿಸಲು ಅರಣ್ಯ ಹಕ್ಕು ಕಾಯ್ದೆಯಡಿ ಅವ ಕಾಶವಿದೆ. ಸಂಬಂಧಪಟ್ಟ ಇಲಾಖೆಗಳು ಅನುಮತಿ ಕೋರಿ ಪರಿವೇಶ್ (parivesh.nic.in) ವೆಬ್‌ಸೈಟ್‌ನಲ್ಲಿ ಅರ್ಜಿ ಸಲ್ಲಿಸಿದರೆ, ವಿಶೇಷ ಕಾಳಜಿ ತೆಗೆದುಕೊಂಡು ಕ್ರಮ ಕೈಗೊಳ್ಳಲಾಗುವುದು’ ಎಂದು ಕಾರ್ಕಳ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ರುತ್ರನ್ ಪಿ. ತಿಳಿಸಿದ್ದಾರೆ.
‘ಪ್ರಜಾವಾಣಿ’ಯಲ್ಲಿ ಗುರುವಾರ ಪ್ರಕಟಗೊಂಡ ‘ಕೇಳುತ್ತಿಲ್ಲ ಮಲೆ ಮಕ್ಕಳ ಅಳಲು’ ವರದಿಗೆ ಪ್ರತಿಕ್ರಿಯಿಸಿದ ಅವರು, ‘ರಾಷ್ಟ್ರೀಯ ಉದ್ಯಾನ ವ್ಯಾಪ್ತಿಯ ಜಮೀನನ್ನು ಸಾರ್ವಜನಿಕ ಉದ್ದೇಶಕ್ಕೆ ಬಳಸಲು ಕೆಲವೊಂದು ಮಾರ್ಗಸೂಚಿ ಗಳಿವೆ. ವಿದ್ಯುತ್ ಸಂಪರ್ಕ, ರಸ್ತೆ ಅಭಿವೃದ್ಧಿ ಸೇರಿದಂತೆ ಮೂಲಸೌಕರ್ಯ ಕಲ್ಪಿಸಲು ಕಾನೂನಿನ ಚೌಕಟ್ಟಿನಲ್ಲಿ ಅವಕಾಶವಿದೆ. ಕಾಮಗಾರಿ ನಡೆಸುವ ಮೆಸ್ಕಾಂ, ಲೋಕೋ ಪಯೋಗಿ, ಪಂಚಾಯತ್‌ರಾಜ್ ಎಂಜಿನಿಯರಿಂಗ್, ಸಮಾಜ ಕಲ್ಯಾಣ ಇಲಾಖೆಗಳು ಅನ್‌ಲೈನ್‌ನಲ್ಲಿ ಅನುಮತಿ ಕೋರಿ ಅರ್ಜಿ ಸಲ್ಲಿಸಬೇಕು. ಆದರೆ, ಕುತ್ಲೂರಿಗೆ ಸಂಬಂಧಿಸಿದಂತೆ ಯಾವುದೇ ಅರ್ಜಿ ಈತನಕ ಬಂದಿಲ್ಲ’ ಎಂದು ಅವರು ತಿಳಿಸಿದ್ದಾರೆ.
‘ಪರಿ ವೇಶ್’ನಲ್ಲಿ ಅರ್ಜಿ ಸಲ್ಲಿಸುವುದಕ್ಕೆ ಸಂಬಂಧಿಸಿದಂತೆ ಕಳೆದ ಸೆಪ್ಟೆಂಬರ್‌ನಲ್ಲಿ ಕಾರ್ಕಳ ವನ್ಯಜೀವಿ ವಿಭಾಗದ ವ್ಯಾಪ್ತಿಯ ನಾಲ್ಕು ಜಿಲ್ಲೆಗಳ ಸಂಬಂಧಪಟ್ಟ ಅಧಿಕಾರಿಗಳಿಗೆ ತರಬೇತಿ ನೀಡಲಾಗಿದೆ. ಬೇರೆ ಬೇರೆ ತಾಲ್ಲೂಕುಗಳಿಂದ ಅರ್ಜಿಗಳು ಬಂದಿವೆ. ಯಾವುದೇ ಅರ್ಜಿ ತಿರಸ್ಕಾರ ಆಗುವ ಸಾಧ್ಯತೆ ಕಡಿಮೆ’ ಎಂದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.