ADVERTISEMENT

ಆ್ಯಸಿಡ್ ನಿಷೇಧಕ್ಕೆ ಇನ್ನೆರಡು ದಿನದಲ್ಲಿ ಕ್ರಮ: ಜಿ. ಪರಮೇಶ್ವರ

​ಪ್ರಜಾವಾಣಿ ವಾರ್ತೆ
Published 7 ಮಾರ್ಚ್ 2024, 7:24 IST
Last Updated 7 ಮಾರ್ಚ್ 2024, 7:24 IST
ಡಾ. ಜಿ ಪರಮೇಶ್ವರ
ಡಾ. ಜಿ ಪರಮೇಶ್ವರ   

ಬೆಂಗಳೂರು: 'ಆ್ಯಸಿಡ್ ನಿಷೇಧದ ಕುರಿತು ರಾಜ್ಯ ಪೊಲೀಸ್ ಮಹಾನಿರ್ದೇಶಕರು ಸಂಬಂಧಪಟ್ಟ ಇಲಾಖೆಗೆ ಪತ್ರ ಬರೆಯಲಿದ್ದಾರೆ' ಎಂದು ಗೃಹ ಸಚಿವ ಜಿ. ಪರಮೇಶ್ವರ ಹೇಳಿದರು.

ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಆ್ಯಸಿಡ್ ದುರ್ಬಳಕೆಯಾಗುತ್ತಿದೆ. ಇದರಿಂದ ಮಹಿಳೆಯರು ದೌರ್ಜನ್ಯಕ್ಕೆ ಒಳಗಾಗುತ್ತಿದ್ದಾರೆ. ಎಲ್ಲರ ಕೈಗೂ ಸುಲಭವಾಗಿ ಆ್ಯಸಿಡ್ ಸಿಗಬಾರದು. ಅಗತ್ಯತೆ ಇರುವರಿಗೆ ಮಾತ್ರ ಸಿಗಬೇಕು. ಈ ಕುರಿತು ಡಿಜಿ ಮತ್ತು ಐಜಿಪಿ ಅಲೋಕ್ ಮೋಹನ್ ಅವರು, ಇನ್ನೆರಡು ದಿನದಲ್ಲಿ ಸಂಬಂಧಪಟ್ಟ ಇಲಾಖೆ ಹಾಗೂ ಉದ್ಯಮಗಳಿಗೆ ಪತ್ರ ಬರೆದು ಕ್ರಮ ತೆಗೆದುಕೊಳ್ಳಲಿದ್ದಾರೆ' ಎಂದು ತಿಳಿಸಿದರು.

'ರಾಮೇಶ್ವರ ಕೆಫೆ ಹೋಟೆಲ್‌ನಲ್ಲಿ ನಡೆದ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯ ಕುರಿತು ಕೆಲವು ಮಹತ್ವದ ಸುಳಿವು ಸಿಕ್ಕಿವೆ. ಘಟನೆಯ ನಂತರ ಬಟ್ಟೆ ಬದಲಾಯಿಸಿಕೊಂಡು, ಬಸ್ಸಿನಲ್ಲಿ ಹೋಗಿರುವ ಬಗ್ಗೆ ಖಚಿತ ಮಾಹಿತಿ ಲಭ್ಯವಾಗಿದೆ. ಪ್ರಕರಣದ ಎಲ್ಲ ವಿಷಯಗಳನ್ನು ಈಗಲೇ ಬಹಿರಂಗಪಡಿಸಲು ಸಾಧ್ಯವಿಲ್ಲ. ಆದಷ್ಟು ಶೀಘ್ರ ಆರೋಪಿಯನ್ನು ಹಿಡಿಯಲಾಗುವುದು' ಎಂದು ಹೇಳಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.