ADVERTISEMENT

ವಿಧಿ ವಿಜ್ಞಾನ ವರದಿ 15 ದಿನದಲ್ಲಿ ಲಭ್ಯವಾಗುವಂತೆ ಮಾಡಲು ಕ್ರಮ: ಬೊಮ್ಮಾಯಿ

2,500 ಪೊಲೀಸ್ ವಸತಿ ಗೃಹಗಳ ನಿರ್ಮಾಣ ಶೀಘ್ರ ಪೂರ್ಣ

​ಪ್ರಜಾವಾಣಿ ವಾರ್ತೆ
Published 29 ಡಿಸೆಂಬರ್ 2022, 6:35 IST
Last Updated 29 ಡಿಸೆಂಬರ್ 2022, 6:35 IST
ಬೆಳಗಾವಿ ನಗರ ಪೊಲೀಸ್ ಆಯುಕ್ತರ ನೂತನ ಕಚೇರಿಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬುಧವಾರ ಉದ್ಘಾಟಿಸಿದರು. ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ, ಗೃಹ ಸಚಿವ ಆರಗ ಜ್ಞಾನೇಂದ್ರ, ಶಾಸಕ ಅನಿಲ್ ಬೆನಕೆ, ಸಂಸದೆ ಮಂಗಲಾ ಅಂಗಡಿ, ಶಾಸಕ ಮಹೇಶ ಕುಮಠಳ್ಳಿ ಇದ್ದಾರೆ
ಬೆಳಗಾವಿ ನಗರ ಪೊಲೀಸ್ ಆಯುಕ್ತರ ನೂತನ ಕಚೇರಿಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬುಧವಾರ ಉದ್ಘಾಟಿಸಿದರು. ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ, ಗೃಹ ಸಚಿವ ಆರಗ ಜ್ಞಾನೇಂದ್ರ, ಶಾಸಕ ಅನಿಲ್ ಬೆನಕೆ, ಸಂಸದೆ ಮಂಗಲಾ ಅಂಗಡಿ, ಶಾಸಕ ಮಹೇಶ ಕುಮಠಳ್ಳಿ ಇದ್ದಾರೆ   

ಬೆಳಗಾವಿ: ‘ವಿಧಿ ವಿಜ್ಞಾನ ಪ್ರಯೋಗಾಲಯದ ವರದಿ 15 ದಿನಗಳಲ್ಲಿ ಲಭ್ಯವಾಗುವಂತೆ ಮಾಡಲು ಕ್ರಮ ವಹಿಸಲಾಗುವುದು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಬೆಳಗಾವಿ ನಗರ ಪೊಲೀಸ್‌ ಆಯುಕ್ತರ ನೂತನ ಕಚೇರಿಯನ್ನು ಬುಧವಾರ ಉದ್ಘಾಟಿಸಿ ಮಾತನಾಡಿ,‘ಈ ಹಿಂದೆ ವಿಧಿ ವಿಜ್ಞಾನ ಪ್ರಯೋಗಾಲಯದ ವರದಿಗಳು ಕೈಸೇರಲು ಮೂರು ತಿಂಗಳು ಹಿಡಿಯುತ್ತಿತ್ತು. ಸದ್ಯ 30 ದಿನದಲ್ಲಿ ವರದಿ ನೀಡಲಾಗುತ್ತಿದೆ’ ಎಂದರು.

‘ರಾಜ್ಯ ಪೊಲೀಸ್ ವಸತಿ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ನಿಗಮದ ವತಿಯಿಂದ ಈ ಹಣಕಾಸು ವರ್ಷದಲ್ಲೇ 2,500 ಮನೆಗಳ ನಿರ್ಮಾಣ ಪೂರ್ಣಗೊಳಿಸಲಾಗುವುದು’ ಎಂದು ಹೇಳಿದರು.

‘ಸರ್ಕಾರದ ವತಿಯಿಂದ 116 ಪೊಲೀಸ್ ಠಾಣೆಗಳ ಹೊಸ ಕಟ್ಟಡ ನಿರ್ಮಿಸಲಾಗಿದೆ. ಎಲ್ಲಾ ಪೊಲೀಸ್ ಠಾಣೆಗಳು ಉದ್ಘಾಟನೆ ಹಂತದಲ್ಲಿವೆ. ಪೊಲೀಸ್ ಸಾರಿಗೆ ವ್ಯವಸ್ಥೆ ಬಲಪಡಿಸಲು ₹80 ಕೋಟಿ ನೀಡಲಾಗಿದೆ. 300ಕ್ಕೂ ಅಧಿಕ ಜೀಪ್ ಸ್ಕಾರ್ಪಿಯೊ, ಬೊಲೇರೊ ವಾಹನಗಳನ್ನು ಖರೀದಿಸಲಾಗಿದೆ. ವಿವಿಧ ಹಂತದ ಎಲ್ಲಾ ಪೊಲೀಸ್ ಅಧಿಕಾರಿಗಳಿಗೂ ವಾಹನಗಳನ್ನು ಒದಗಿಸಲು ಸರ್ಕಾರ ಆದೇಶ ಹೊರಡಿಸಿದೆ’ ಎಂದರು.

‘ಕರ್ನಾಟಕ- ಮಹಾರಾಷ್ಟ್ರ ಗಡಿ ತಂಟೆ ಉಂಟಾದಾಗ ನಮ್ಮ ಪೊಲೀಸರು ಸರಿಯಾದ ನಿರ್ಧಾರ ತೆಗೆದುಕೊಂಡು ನಿಭಾಯಿಸಿದ್ದಾರೆ’ ಎಂದು ತಿಳಿಸಿದರು.

**

'ಕರ್ನಾಟಕ- ಮಹಾರಾಷ್ಟ್ರ ಗಡಿ ತಂಟೆ ಉಂಟಾದಾಗ ನಮ್ಮ ಪೊಲೀಸರು ಸರಿಯಾದ ನಿರ್ಧಾರ ತೆಗೆದುಕೊಂಡು ನಿಭಾಯಿಸಿದ್ದಾರೆ'
–ಬಸವರಾಜ ಬೊಮ್ಮಾಯಿ, ಮುಖ್ಯಮಂತ್ರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.