ADVERTISEMENT

ಕಾವೇರಿ ನೀರು ಹಂಚಿಕೆ ವಿವಾದ: ನಟ ದರ್ಶನ್- ಸುದೀಪ್‌ ಪ್ರತಿಕ್ರಿಯೆ ಹೀಗಿತ್ತು...

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 20 ಸೆಪ್ಟೆಂಬರ್ 2023, 10:35 IST
Last Updated 20 ಸೆಪ್ಟೆಂಬರ್ 2023, 10:35 IST
ದರ್ಶನ್ ಮತ್ತು ಸುದೀಪ್‌
ದರ್ಶನ್ ಮತ್ತು ಸುದೀಪ್‌   

ಬೆಂಗಳೂರು: ತಮಿಳುನಾಡಿಗೆ ನೀರು ಹರಿಸುತ್ತಿರುವುದನ್ನು ಖಂಡಿಸಿ ರೈತರು ರಸ್ತೆಗಿಳಿದು ಹೋರಾಟ ನಡೆಸುತ್ತಿದ್ದಾರೆ. ರೈತರ ಹೋರಾಟಕ್ಕೆ ವಿವಿಧ ರಾಜಕೀಯ ಪಕ್ಷಗಳು, ಕನ್ನಡಪರ ಸಂಘಟನೆಗಳು ಬೆಂಬಲ ಸೂಚಿಸಿವೆ. ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದರೂ ಕಾವೇರಿ ಹೋರಾಟದ ಸಂಬಂಧ ಚಿತ್ರರಂಗ ಧ್ವನಿ ಎತ್ತದಿರುವುದು ಹೋರಾಟಗಾರರ ಕೆಂಗಣ್ಣಿಗೆ ಗುರಿಯಾಗಿದೆ.

ಈ ಎಲ್ಲಾ ಬೆಳವಣಿಗೆಗಳ ನಡುವೆ ಕರ್ನಾಟಕ –ತಮಿಳುನಾಡು ನಡುವಿನ ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿ ಸಾಮಾಜಿಕ ಮಾಧ್ಯಮ ‘ಎಕ್ಸ್‌’ನಲ್ಲಿ ನಟರಾದ ಸುದೀಪ್‌ ಹಾಗೂ ದರ್ಶನ್‌ ಪ್ರತಿಕ್ರಿಯೆ ನೀಡಿದ್ದಾರೆ.

‘ರಾಜ್ಯದ ಪಾಲಿನ ಕಾವೇರಿ ನೀರಿಗೆ ಕತ್ತರಿ ಹಾಕಿ ಮತ್ತಷ್ಟು ನೀರು ಪಡೆದುಕೊಳ್ಳುವ ಪ್ರಯತ್ನವನ್ನು ತಮಿಳುನಾಡು ನಿರಂತರವಾಗಿ ಮಾಡುತ್ತಿದೆ. ರಾಜ್ಯದಲ್ಲಿ ಈ ವರ್ಷ ಸರಿಯಾಗಿ ಮಳೆಯಾಗಿಲ್ಲ. ನೀರಿನ ಅಭಾವ ತಲೆದೋರಿದೆ. ಈ ಸಮಯದಲ್ಲಿ ನೀರಾವರಿ ಪ್ರದೇಶಕ್ಕೆ ಹಾನಿಯಾಗುವ ಸಾಧ್ಯತೆ ಬಹಳಷ್ಟು ಇರುವ ಕಾರಣ ಎಲ್ಲಾ ಅಂಕಿ-ಅಂಶಗಳನ್ನು ಪರಿಗಣಿಸಿ ಆದಷ್ಟು ಬೇಗ ನ್ಯಾಯ ಸಿಗುವಂತಾಗಲಿ’ ಎಂದು ದರ್ಶನ್ ಕಿಡಿಕಾರಿದ್ದಾರೆ.

ADVERTISEMENT
‘ಕಾವೇರಿ ನಮ್ಮ ಹಕ್ಕು’
ನಮ್ಮ ಕಾವೇರಿ ನಮ್ಮ ಹಕ್ಕು. ಅಷ್ಟು ಒಮ್ಮತದಿಂದ ಗೆಲ್ಲಿಸಿರುವ ಸರ್ಕಾರ ಕಾವೇರಿಯನ್ನೇ ನಂಬಿರುವ ಜನರನ್ನು ಕೈಬಿಡುವುದಿಲ್ಲ ಎಂದು ನಾನು ನಂಬಿದ್ದೇನೆ. ಈ ಕೂಡಲೇ ತಜ್ಞರು ಕಾರ್ಯತಂತ್ರ ರೂಪಿಸಿ ನ್ಯಾಯ ನೀಡಲಿ ಎಂದು ಒತ್ತಾಯಿಸುತ್ತೇನೆ. ನೆಲ-ಜಲ-ಭಾಷೆಯ ಹೋರಾಟದಲ್ಲಿ ನನ್ನ ಧ್ವನಿಯೂ ಇದೆ. ಕಾವೇರಿ ತಾಯಿ ಕರುನಾಡನ್ನು ಕಾಪಾಡಲಿ’ ಎಂದು ಪೋಸ್ಟ್‌ನಲ್ಲಿ ನಟ ಸುದೀಪ್‌ ಉಲ್ಲೇಖಿಸಿದ್ದಾರೆ.

ಹಲವು ದಿನಗಳಿಂದ ಕಾವೇರಿ ಹೋರಾಟದ ಪರವಾಗಿ ಧ್ವನಿ ಎತ್ತದ ಕನ್ನಡ ಚಿತ್ರರಂಗದ ನಟ-ನಟಿಯರ ವಿರುದ್ಧ ರೈತರು ಆಕ್ರೋಶ ವ್ಯಕ್ತಪಡಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.