ADVERTISEMENT

ರೈತ ದೇಶದ ಬೆನ್ನೆಲುಬು, ಆ ರೈತನಿಗೆ ಬೆನ್ನೆಲುಬು ನಮ್ಮ ಕಾವೇರಿ: ಶಿವರಾಜ್‌ಕುಮಾರ್

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 20 ಸೆಪ್ಟೆಂಬರ್ 2023, 13:27 IST
Last Updated 20 ಸೆಪ್ಟೆಂಬರ್ 2023, 13:27 IST
<div class="paragraphs"><p>ನಟ ಶಿವರಾಜ್‌ಕುಮಾರ್‌</p></div>

ನಟ ಶಿವರಾಜ್‌ಕುಮಾರ್‌

   

ಬೆಂಗಳೂರು: ಕರ್ನಾಟಕ –ತಮಿಳುನಾಡು ನಡುವಿನ ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿ ನಟ ಶಿವರಾಜ್‌ಕುಮಾರ್‌ ಅವರು ಸಾಮಾಜಿಕ ಮಾಧ್ಯಮ ‘ಎಕ್ಸ್‌’ನಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

ಕಾವೇರಿ ವಿಚಾರವಾಗಿ ವಿಡಿಯೊ ಹಂಚಿಕೊಂಡಿರುವ ಅವರು, ‘ರೈತ ದೇಶದ ಬೆನ್ನೆಲುಬು ಎಂದು ಹೇಳುತ್ತೇವೆ. ಆ ರೈತನ ಬೆನ್ನೆಲುಬು ನಮ್ಮ ಕಾವೇರಿ. ರಾಜ್ಯದಲ್ಲಿ ಈ ವರ್ಷ ಸರಿಯಾಗಿ ಮಳೆಯಾಗಿಲ್ಲ. ನೀರಿನ ಅಭಾವ ತಲೆದೋರಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕರ್ನಾಟಕ ಮತ್ತು ತಮಿಳುನಾಡಿನ ನಾಯಕರು ಹಾಗೂ ನ್ಯಾಯಾಲಯ ಎಲ್ಲ ಅಂಶಗಳನ್ನು ಪರಿಶೀಲಿಸಿ ಒಂದು ಸಮಾಧಾನಕರ ಪರಿಹಾರ ಕಂಡುಕೊಳ್ಳಬೇಕು ಎಂಬುದು ನನ್ನ ಪ್ರಾರ್ಥನೆ’ ಎಂದು ಹೇಳಿದ್ದಾರೆ.

ADVERTISEMENT

ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿ ನಟರಾದ ಸುದೀಪ್‌ ಹಾಗೂ ದರ್ಶನ್‌ ಕೂಡ ಪ್ರತಿಕ್ರಿಯೆ ನೀಡಿದ್ದಾರೆ.

ತಮಿಳುನಾಡಿಗೆ ನೀರು ಹರಿಸುತ್ತಿರುವುದನ್ನು ಖಂಡಿಸಿ ರೈತರು ರಸ್ತೆಗಿಳಿದು ಹೋರಾಟ ನಡೆಸುತ್ತಿದ್ದಾರೆ. ರೈತರ ಹೋರಾಟಕ್ಕೆ ವಿವಿಧ ರಾಜಕೀಯ ಪಕ್ಷಗಳು, ಕನ್ನಡಪರ ಸಂಘಟನೆಗಳು ಬೆಂಬಲ ಸೂಚಿಸಿವೆ. ಹಲವು ದಿನಗಳಿಂದ ನಡೆಯುತ್ತಿರುವ ಕಾವೇರಿ ಹೋರಾಟದ ಪರವಾಗಿ ಧ್ವನಿ ಎತ್ತದ ಕನ್ನಡ ಚಿತ್ರರಂಗದ ನಟ-ನಟಿಯರ ವಿರುದ್ಧ ರೈತರು ಆಕ್ರೋಶ ವ್ಯಕ್ತಪಡಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.