ADVERTISEMENT

ಹೆಚ್ಚುವರಿ ಡಿಸಿಎಂ ಹುದ್ದೆ: ಬಹಿರಂಗ ಹೇಳಿಕೆ ನೀಡದಂತೆ ಸಚಿವರಿಗೆ ಸಿಎಂ ತಾಕೀತು

​ಪ್ರಜಾವಾಣಿ ವಾರ್ತೆ
Published 27 ಜೂನ್ 2024, 6:26 IST
Last Updated 27 ಜೂನ್ 2024, 6:26 IST
<div class="paragraphs"><p>ಮುಖ್ಯಮಂತ್ರಿ ಸಿದ್ದರಾಮಯ್ಯ</p></div>

ಮುಖ್ಯಮಂತ್ರಿ ಸಿದ್ದರಾಮಯ್ಯ

   

ಬೆಂಗಳೂರು: ಹೆಚ್ಚುವರಿ ಉಪ ಮುಖ್ಯಮಂತ್ರಿ ಹುದ್ದೆಯ ಬಗ್ಗೆ ಬಹಿರಂಗ ಹೇಳಿಕೆ ನೀಡದಂತೆ ಸಚಿವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಾಕೀತು ಮಾಡಿದ್ದಾರೆ ಎಂದು ಗೊತ್ತಾಗಿದೆ.

ದೂರವಾಣಿ ಮೂಲಕ ಸಹಕಾರ ಸಚಿವ ಕೆ.ಎನ್.ರಾಜಣ್ಣ ಜೊತೆ ಮಾತನಾಡಿದ ಸಿದ್ದರಾಮಯ್ಯ, ಈ ಬಗ್ಗೆ ಎಚ್ಚರಿಕೆ ನೀಡಿದ್ದಾರೆ.

ADVERTISEMENT

ಬಹಿರಂಗವಾಗಿ ಹೇಳಿಕೆಗಳನ್ನು ನೀಡುವುದರಿಂದ ಸರ್ಕಾರ ಮತ್ತು ಪಕ್ಷದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದೆ ಎಂಬ ಅಭಿಪ್ರಾಯವನ್ನು ಮುಖ್ಯಮಂತ್ರಿ ವ್ಯಕ್ತಪಡಿಸಿದ್ದಾರೆ ಎಂದೂ ಕಾಂಗ್ರೆಸ್ ಮೂಲಗಳು ಹೇಳಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.