ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸೆ.5 ರಿಂದ ನಾಲ್ಕು ದಿನಗಳ ಕಾಲ ಮತ್ತೆ ಭಾರಿ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಸೆ.5ರಂದು ಕೊಡಗು ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಹಾಗೂ ದಾವಣಗೆರೆ, ಚಿತ್ರದುರ್ಗ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ತುಮಕೂರು, ಮೈಸೂರು, ಚಿಕ್ಕಬಳ್ಳಾಪುರ, ಮಂಡ್ಯ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ ಜಿಲ್ಲೆಗಳಲ್ಲಿ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.