ADVERTISEMENT

Karnataka Budget: ರೈತರಿಗಾಗಿ ಮತ್ತೆ ‘ಯಶಸ್ವಿನಿ’ ಜಾರಿ

​ಪ್ರಜಾವಾಣಿ ವಾರ್ತೆ
Published 4 ಮಾರ್ಚ್ 2022, 19:55 IST
Last Updated 4 ಮಾರ್ಚ್ 2022, 19:55 IST
   

ಬೆಂಗಳೂರು: ರೈತರ ಬಹು ದಿನಗಳ ಬೇಡಿಕೆಯಾದ ‘ಯಶಸ್ವಿನಿ’ ಯೋಜನೆಯನ್ನು ಪರಿಷ್ಕರಿಸಿ ಮರು ಜಾರಿಗೊಳಿಸಲು ಸರ್ಕಾರ ನಿರ್ಧರಿಸಿದೆ.

ಈ ಯೋಜನೆಯಿಂದ ರೈತ ಕುಟುಂಬಗಳಿಗೆ ಅತ್ಯುತ್ತಮ ವೈದ್ಯಕೀಯ ಸೌಲಭ್ಯಗಳು ಲಭಿಸಲಿದೆ. ಈ ಉದ್ದೇಶಕ್ಕಾಗಿ ₹ 300 ಕೋಟಿ ಒದಗಿಸಲಾಗುವುದು ಎಂದು ಬಜೆಟ್‌ನಲ್ಲಿ ತಿಳಿಸಲಾಗಿದೆ.

ತಾಳೆಗೆ ಪ್ರೋತ್ಸಾಹ: ‘ರಾಷ್ಟ್ರೀಯ ಖಾದ್ಯ ತೈಲಗಳು–ತಾಳೆ ಎಣ್ಣೆ ಅಭಿಯಾನ’ದಡಿ ತಾಳೆ ಬೆಳೆಯುವ ಪ್ರದೇಶದ ವ್ಯಾಪ್ತಿಯನ್ನು ಐದು ವರ್ಷಗಳಲ್ಲಿ 25 ಸಾವಿರ ಹೆಕ್ಟೇರ್‌ಗಳಷ್ಟು ಹೆಚ್ಚಿಸುವ ಗುರಿ ಇದ್ದು, ಇದಕ್ಕಾಗಿ ₹35 ಕೋಟಿ ಅನುದಾನ ನಿಗದಿ ಮಾಡಲಾಗಿದೆ.

ADVERTISEMENT

ತೋಟಗಾರಿಕೆಯಲ್ಲಿ ವಿನೂತನ ತಂತ್ರಜ್ಞಾನ ಅಳವಡಿಕೆ, ಯಂತ್ರೋಪಕರಣಗಳ ಬಳಕೆಗೆ ₹25 ಕೋಟಿ ಅನುದಾನ ನೀಡಲಾಗಿದೆ. ಸಾಂಬಾರ ಪದಾರ್ಥಗಳ ಗುಣಮಟ್ಟ ವೃದ್ಧಿಗೆ ಬ್ಯಾಡಗಿಯಲ್ಲಿ ಸಂಶೋಧನಾ ಕೇಂದ್ರ ಸ್ಥಾಪಿಸಲು ಉದ್ದೇಶಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.