ADVERTISEMENT

ಕೃಷಿ ಸಾಲ; ರೈತರಿಗೆ ಬಂಧನ ವಾರಂಟ್: ರೈತರ ಹಿತಕ್ಕೆ ಸಿಎಂ ಸೂಚನೆ

​ಪ್ರಜಾವಾಣಿ ವಾರ್ತೆ
Published 4 ನವೆಂಬರ್ 2018, 11:12 IST
Last Updated 4 ನವೆಂಬರ್ 2018, 11:12 IST
   

ಬೆಂಗಳೂರು:ಕೃಷಿ ಸಾಲ ಪಡೆದ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲ್ಲೂಕಿನ ಏಣಗಿ ಗ್ರಾಮದ ಐವರು ರೈತರಿಗೆ ಆ್ಯಕ್ಸಿಸ್ ಬ್ಯಾಂಕ್ ಈಚೆಗೆ ಕೋಲ್ಕತ್ತನ್ಯಾಯಾಲಯದ ಮೂಲಕ ಬಂಧನ ವಾರಂಟ್ ಹೊರಡಿಸಿದೆ. ಇದಕ್ಕೆ ರೈತರು ವಿರೋಧ ವ್ಯಕ್ತಪಡಿಸಿ, ಪ್ರತಿಭಟನೆಯನ್ನೂ ನಡೆಸಿದ್ದಾರೆ. ಇದರ ಬೆನ್ನಲ್ಲೇ ರೈತರ ಹಿತ ಕಾಯುವಂತೆ ಮುಖ್ಯಮಂತ್ರಿ ಜಿಲ್ಲಾಧಿಕಾರಿಗೆ ಸೂಚನೆ ನೀಡಿದ್ದಾರೆ.

ಆ್ಯಕ್ಸಿಸ್ ಬ್ಯಾಂಕ್ ಕೋಲ್ಕತ್ತದ ನ್ಯಾಯಾಲಯದಲ್ಲಿ ಬೆಳಗಾವಿ ಜಿಲ್ಲೆಯ ರೈತರ ಮೇಲೆ ಮೊಕದ್ದಮೆ ದಾಖಲಿಸಿ ನ್ಯಾಯಾಲಯ ಬಂಧನ ವಾರಂಟ್ ಹೊರಡಿಸಿದ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರವಾಣಿ ಮೂಲಕ ಮಾತನಾಡಿ ರೈತರ ಹಿತ ಕಾಯುವಂತೆ ನಿರ್ದೇಶಿಸಿರುವುದಾಗಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಟ್ವಿಟ್‌ ಮಾಡಿದ್ದಾರೆ.

‘‌ಸಾಲ ಮನ್ನಾ ಯೋಜನೆ ವ್ಯಾಪ್ತಿಗೆ ಬರುವ ರೈತರು ಆತಂಕ ಪಡುವ ಅಗತ್ಯವಿಲ್ಲ. ಸರ್ಕಾರ ಬೆಂಬಲಕ್ಕಿದೆ’ ಎಂದು ಭರವಸೆ ನೀಡಿರುವ ಸಿಎಂ ಈ ಪ್ರಕರಣಗಳ ಕುರಿತು ಸಂಪೂರ್ಣ ವರದಿ ಸಲ್ಲಿಸುವಂತೆ ಸೂಚಿಸಿಮತ್ತೊಂದು ಟ್ವಿಟ್‌ ಮಾಡಿದ್ದಾರೆ.

ADVERTISEMENT

* ಇದನ್ನೂ ಓದಿ...

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.