ಬೆಂಗಳೂರು: ಹಳೇ ಪಿಂಚಣಿ ಯೋಜನೆ (ಒಪಿಎಸ್) ಮರುಜಾರಿಗೆ ಹೋರಾಟ ನಡೆಸಲು ಕರ್ನಾಟಕ ರಾಜ್ಯ ಅನುದಾನಿತ ಶಾಲಾ, ಕಾಲೇಜುಗಳ ಬೋಧಕ ಮತ್ತು ಬೋಧಕೇತರ ಸಂಘಟನೆಗಳ ಒಕ್ಕೂಟ ನಿರ್ಧಾರಿಸಿದೆ.
ಒಕ್ಕೂಟದ ಅಧ್ಯಕ್ಷ ಎಂ.ಪಿ.ಕರಿಬಸಪ್ಪ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ ಅನುದಾನಿತ ಶಾಲಾ- ಕಾಲೇಜು ನೌಕರರ ಸಭೆಯಲ್ಲಿ ಈ ಕುರಿತು ಒಮ್ಮತದ ನಿರ್ಣಯ ತೆಗೆದುಕೊಳ್ಳಲಾಯಿತು.
2006ರ ಬಳಿಕ ನೇಮಕವಾದ ಅನುದಾನಿತ ಶಿಕ್ಷಣ ಸಂಸ್ಥೆಗಳ ಎಲ್ಲ ನೌಕರರಿಗೂ ಹಳೆಯ ಪಿಂಚಣಿ ವ್ಯವಸ್ಥೆ ಜಾರಿಗೊಳಿಸಬೇಕು. ಹಳೇ ಪಿಂಚಣಿ ವಂಚಿತ ನೌಕರರ ವೇದಿಕೆಯ ಅಧ್ಯಕ್ಷ ಹೆಬ್ಬೂರ ಅವರ ನೇತೃತ್ವದಲ್ಲಿ ಹೋರಾಟಕ್ಕೆ ಕೈಜೋಡಿಸಬೇಕು ಎಂದು ಸಭೆ ತೀರ್ಮಾನಿಸಿತು.
ಮುಖಂಡರಾದ ಗೋವಿಂದೇಗೌಡ, ಚಂದ್ರೇಗೌಡ, ಶ್ರೀಕಂಠಯ್ಯ, ರೇವಣ್ಣ, ಮಾಲಿ ಪಾಟೀಲ, ಹರೀಶ್ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.