ಬೆಂಗಳೂರು: ಅನುದಾನಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಶಿಕ್ಷಕರ ವರ್ಗಾವಣೆಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಅವಕಾಶ ಕಲ್ಪಿಸಿದೆ.
ಶಿಕ್ಷಕರು ತಾವು ಕಾರ್ಯನಿರ್ವಹಿಸುತ್ತಿರುವ ಆಡಳಿತ ಮಂಡಳಿಗಳ ಇತರೆ ಶಾಲೆಗಳಿಗೆ ಅಥವಾ ಇತರೆ ಆಡಳಿತ ಮಂಡಳಿಗಳ ಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ವರ್ಗಾವಣೆ ಕೋರಿ ಅರ್ಜಿ ಸಲ್ಲಿಸಬಹುದು. ಶಿಕ್ಷಕರ ವರ್ಗಾವಣೆ ಪ್ರಸ್ತಾವನೆಗಳನ್ನು ಆಡಳಿತ ಮಂಡಳಿಗಳು ಮೇ 31ರ ಒಳಗೆ ಆಯಾ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸಲ್ಲಿಸಬೇಕು.
ವರ್ಗಾವಣೆ ಬಯಸಿದ ಶಾಲೆಗಳಲ್ಲಿ ಮಕ್ಕಳ ಅನುಪಾತಕ್ಕೆ ಅನುಗುಣವಾಗಿ ಶಿಕ್ಷಕರ ಆವಶ್ಯಕತೆ ಕುರಿತು ಶಿಕ್ಷಣಾಧಿಕಾರಿ ಗಳು ಖಚಿತಪಡಿಸಿಕೊಳ್ಳ ಬೇಕು. ಪ್ರಸ್ತಾವನೆಗಳನ್ನು ಪರಿಶೀಲಿಸಿ, ದಾಖಲೆಗಳ ಸಹಿತ ಮೇಲಧಿಕಾರಿಗಳಿಗೆ ಸಲ್ಲಿಸಬೇಕು. ವರ್ಗಾವಣೆಯ ಎಲ್ಲ ಪ್ರಕ್ರಿಯೆಗಳನ್ನು ಜುಲೈ 31ರೊಳಗೆ ಪೂರ್ಣಗೊಳಿಸಲು ಸುತ್ತೋಲೆಯಲ್ಲಿ ಸೂಚಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.