ಬೆಂಗಳೂರು: ‘ಉತ್ತರ ಪ್ರದೇಶದ ಹಾಥರಸ್‌ನಲ್ಲಿ ನಡೆದಿರುವ ಅತ್ಯಾಚಾರ ಪ್ರಕರಣವನ್ನು ಅಲ್ಲಿನ ಸರ್ಕಾರವು ಮುಚ್ಚಿಹಾಕಲು ಯತ್ನಿಸುತ್ತಿದೆ’ ಎಂದು ಮಾಜಿ ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್ ಆರೋಪಿಸಿದರು.
ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ (ಎಐಎಂಎಸ್‌ಎಸ್) ಆಯೋಜಿಸಿದ್ದ ಆನ್‌ಲೈನ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಹಾಥರಸ್ ಘಟನೆ ದೇಶದ ಜನತೆ ಬೆಚ್ಚಿಬೀಳುವಂತೆ ಮಾಡಿದೆ. ದೂರು ತೆಗೆದುಕೊಳ್ಳದೆ ನಿರ್ಲಕ್ಷ್ಯ ತೋರಿದ ಪೊಲೀಸರು ರಾತ್ರೋರಾತ್ರಿ ಶವವನ್ನು ಸುಟ್ಟು ಹಾಕಿದ್ದಾರೆ. ಸಂತ್ರಸ್ತೆಯ ಕುಟುಂಬದ ಸದಸ್ಯರನ್ನು ಕೂಡ ಭೇಟಿ ಮಾಡಲು ಅವಕಾಶ ನೀಡುತ್ತಿಲ್ಲ. ಪುರುಷ ಪ್ರಧಾನ ಈ ಸಮಾಜದಲ್ಲಿ ಮಹಿಳೆಯರಿಗೂ ಸೂಕ್ತ ಸ್ಥಾನಮಾನ ಸಿಗುವಂತಾಗಬೇಕು. ಅವರ ಮೇಲಿನ ಲೈಂಗಿಕ ಶೋಷಣೆಗಳನ್ನು ತಡೆಯಲು ಕಠಿಣ ಕಾನೂನು ಕ್ರಮಗಳನ್ನು ಕೈಗೊಳ್ಳಬೇಕು’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.