ADVERTISEMENT

ಎ.ಕೆ.ಸುಬ್ಬಯ್ಯ ಆರೋಗ್ಯ ಸ್ಥಿತಿ ಗಂಭೀರ

​ಪ್ರಜಾವಾಣಿ ವಾರ್ತೆ
Published 27 ಆಗಸ್ಟ್ 2019, 7:21 IST
Last Updated 27 ಆಗಸ್ಟ್ 2019, 7:21 IST
   

ಮಡಿಕೇರಿ: ಹಿರಿಯ ರಾಜಕಾರಣಿ, ಹೋರಾಟಗಾರ, ವಕೀಲ ಎ.ಕೆ.ಸುಬ್ಬಯ್ಯ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಸದ್ಯ ಅವರಿಗೆ ಬೆಂಗಳೂರಿನ ಮಣಿಪಾಲ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಸುಬ್ಬಯ್ಯ ಅವರು ಕಳೆದ ಒಂದು ವರ್ಷದಿಂದ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಬೆಂಗಳೂರಿನ ತಮ್ಮ ನಿವಾಸದಲ್ಲಿದ್ದು ಚಿಕಿತ್ಸೆ ಪಡೆಯುತ್ತಿದ್ದ ಅವರು ವಾರಕ್ಕೆ ಮೂರು ದಿನ ಡಯಾಲಿಸಿಸ್‌ಗೆ ಒಳಗಾಗುತ್ತಿದ್ದರು.

ಸೋಮವಾರ ರಾತ್ರಿ ಆರೋಗ್ಯ ಸ್ಥಿತಿ ಗಂಭೀರವಾದ ಕಾರಣ ಆಸ್ಪತ್ರೆಗೆ ದಾಖಲಿಸಲಾಗಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.