ಬೆಂಗಳೂರು: ‘ರಾಜ್ಯಸಭೆ ಚುನಾವಣೆಯಲ್ಲಿ ಐದನೇ ಅಭ್ಯರ್ಥಿಯಾಗಿ ಕಣದಲ್ಲಿರುವ ಡಿ. ಕುಪೇಂದ್ರ ರೆಡ್ಡಿ ಅವರ ಗೆಲುವಿಗಾಗಿ ಜೆಡಿಎಸ್ ಮತ್ತು ಬಿಜೆಪಿ ನಾಯಕರು, ಪಕ್ಷದ ಶಾಸಕರ ಖರೀದಿಗೆ ಮುಂದಾಗಿದ್ದಾರೆ’ ಎಂದು ಆರೋಪಿಸಿ ಪೊಲೀಸ್ ಕಮಿಷನರ್ ಬಿ. ದಯಾನಂದ ಅವರಿಗೆ ಕಾಂಗ್ರೆಸ್ ಮುಖಂಡರು ದೂರು ನೀಡಿದ್ದಾರೆ.
ಮುಖ್ಯಮಂತ್ರಿಯ ಕಾನೂನು ಸಲಹೆಗಾರರೂ ಆದ ಶಾಸಕರಾದ ಎ.ಎಸ್. ಪೊನ್ನಣ್ಣ, ಎನ್.ಎಚ್. ಕೋನರಡ್ಡಿ ನೇತೃತ್ವದ ಕಾಂಗ್ರೆಸ್ ನಿಯೋಗವು ಈ ದೂರು ನೀಡಿದ್ದು, ರಾಜ್ಯಸಭಾ ಚುನಾವಣೆಯನ್ನು ಪಾರದರ್ಶಕವಾಗಿ ನಡೆಸಲು ಕ್ರಮಕೈಗೊಳ್ಳಬೇಕು ಎಂದೂ ಒತ್ತಾಯಿಸಿದೆ.
ರಾಜ್ಯಸಭೆ ಚುನಾವಣೆಗೆ ಆಮಿಷ ನೀಡುತ್ತಿರುವ ಬಗ್ಗೆ ಕಾಂಗ್ರೆಸ್ ಶಾಸಕರು ದೂರು ನೀಡಿರುವ ಬಗ್ಗೆ ಪ್ರತಿಕ್ರಿಯಿಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ‘ನನಗೂ ಈ ವಿಚಾರವಾಗಿ ಮಾಹಿತಿ ಬಂದಿವೆ. ತನಿಖಾ ತಂಡ ಈ ವಿಚಾರದ ಕುರಿತು ತನಿಖೆ ನಡೆಸಲಿದೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.