ಬೆಂಗಳೂರು: ‘ಅಂಬಿಗರ ಚೌಡಯ್ಯನವರ ವಚನ ಸಾಹಿತ್ಯವು ಭಾಷಾಂತರವಾಗಬೇಕು. ಆಗ ಮಾತ್ರ ಇತರ ಭಾಷಿಕರಿಗೂ ಅವರ ಸಾಹಿತ್ಯ ತಲುಪಿಸಲು ಸಾಧ್ಯ’ ಎಂದು ಉದ್ಯಮಿ ಯೋಗೇಶ್ ಅಭಿಪ್ರಾಯಪಟ್ಟರು.
ಹಾವೇರಿ ಜಿಲ್ಲೆ ಚೌಡದಾನಪುರದಲ್ಲಿ ನಡೆದ ಅಂಬಿಗರ ಚೌಡಯ್ಯನವರ ಜಾತ್ರಾ ಮಹೋತ್ಸವ ಹಾಗೂ ವಿವಿಧ ಪೂಜಾ ಕಾರ್ಯಕ್ರಮಗಳಲ್ಲಿ ಮಾತನಾಡಿದರು.
‘ಚೌಡಯ್ಯನವರ ವಚನ ಸಾಹಿತ್ಯವನ್ನುದೇಶದ ಎಲ್ಲ ಜನಾಂಗದವರೂ ಅಧ್ಯಯನ ಮಾಡುವಂತಾಗಬೇಕು. ಅವರ ಸಾಹಿತ್ಯವು ಪದವಿ ತರಗತಿಯ ಪಠ್ಯ ವಿಷಯವಾಗಬೇಕು. ಈ ಬಗ್ಗೆ ಉನ್ನತ ಶಿಕ್ಷಣ ಸಚಿವರ ಜೊತೆ ಚರ್ಚಿಸಬೇಕು. ಅಂಬಿಗರ ಚೌಡಯ್ಯ ಜಯಂತ್ಯೋತ್ಸವವನ್ನು ಅಂತರರಾಷ್ಟ್ರೀಯ ಮಟ್ಟದಲ್ಲಿ ಆಯೋಜಿಸಬೇಕು’ ಎಂದು ತಿಳಿಸಿದರು.
ಅಂಬಿಗರ ಚೌಡಯ್ಯ ಗುರುಪೀಠದ ಶಾಂತಭೀಷ್ಮ ಚೌಡಯ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಮುಖಂಡರಾದ ಬಸವರಾಜ್, ವೆಂಕಟೇಶ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.