ADVERTISEMENT

ಇನ್ನು ವೈದ್ಯರ ಅವಮಾನಿಸಿದರೂ ಶಿಕ್ಷೆ; ಉಭಯ ಸದನಗಳ ಒಪ್ಪಿಗೆ

​ಪ್ರಜಾವಾಣಿ ವಾರ್ತೆ
Published 25 ಜುಲೈ 2024, 15:21 IST
Last Updated 25 ಜುಲೈ 2024, 15:21 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಬೆಂಗಳೂರು: ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿ ಮೇಲೆ ನಡೆಸುವ ಹಿಂಸಾಚಾರವನ್ನು ತಡೆಯುವ ಕಾನೂನನ್ನು ಬಲಪಡಿಸುವ ತಿದ್ದುಪಡಿ ಮಸೂದೆಗೆ ವಿಧಾನ ಮಂಡಲದ ಉಭಯ ಸದನಗಳ ಒಪ್ಪಿಗೆ ದೊರೆತಿದೆ. 

ಹಲ್ಲೆಯ ಕೃತ್ಯಗಳಿಗೆ ಮೂರು ವರ್ಷಗಳಿಂದ ಏಳು ವರ್ಷಗಳವರೆಗೆ ಸೆರೆವಾಸ ಮತ್ತು ಕನಿಷ್ಠ ₹25 ಸಾವಿರದಿಂದ ₹2 ಲಕ್ಷದವರೆಗೆ ದಂಡ ವಿಧಿಸಲು ಇದು ಅವಕಾಶ ಮಾಡಿಕೊಡುತ್ತದೆ. ಅವಮಾನಿಸುವ ಕೃತ್ಯಗಳಿಗೆ ಮೂರು ತಿಂಗಳವರೆಗೆ ಸೆರೆವಾಸ ಅಥವಾ ₹10 ಸಾವಿರದವರೆಗೆ ದಂಡ ವಿಧಿಸಲು ಮಸೂದೆ ಅವಕಾಶ ಮಾಡಿಕೊಡುತ್ತದೆ.

ADVERTISEMENT

ಕರ್ನಾಟಕ ವೈದ್ಯಕೀಯ ಪರಿಷತ್ತಿನ ಸದಸ್ಯರ ಅಧಿಕಾರದ ಅವಧಿ ಮತ್ತಿತರ ನಿಯಮಗಳಿಗೆ ತಿದ್ದುಪಡಿ ತರುವ ಉದ್ದೇಶದಿಂದ ‘ಕರ್ನಾಟಕ ವೈದ್ಯಕೀಯ ನೋಂದಣಿ ಮತ್ತು ಇತರೆ ಕೆಲವು ಕಾನೂನು (ತಿದ್ದುಪಡಿ) ಮಸೂದೆ–2024ನ್ನು ಮಂಡಿಸಿ, ಒಪ್ಪಿಗೆ ಪಡೆಯಲಾಗಿದೆ. 

ಈಗಾಗಲೇ ಜಾರಿಯಲ್ಲಿದ್ದ ವೈದ್ಯಕೀಯ ಸಿಬ್ಬಂದಿ ಮೇಲಿನ ಹಲ್ಲೆ ಮತ್ತು ವೈದ್ಯಕೀಯ ಸಂಸ್ಥೆಗಳ ಆಸ್ತಿಗೆ ಹಾನಿ ನಿಷೇಧ ಕಾಯ್ದೆಯು ವೈದ್ಯಕೀಯ ಸಿಬ್ಬಂದಿಗೆ ಮಾತ್ರ ರಕ್ಷಣೆ ನೀಡುತ್ತದೆ. ತಿದ್ದುಪಡಿ ಮಸೂದೆಯಲ್ಲಿ ಆಸ್ಪತ್ರೆಗಳ ಭದ್ರತಾ ಸಿಬ್ಬಂದಿ, ನಿರ್ವಹಣಾ ಸಿಬ್ಬಂದಿ, ಆಂಬುಲೆನ್ಸ್‌ ಚಾಲಕರು ಮತ್ತು ಸಹಾಯಕರಿಗೂ ರಕ್ಷಣೆ ಒದಗಿಸುತ್ತದೆ.

ವೈದ್ಯಕೀಯ ಸಿಬ್ಬಂದಿಗೆ ಅವಮಾನಿಸುವುದನ್ನೂ ನಿಷೇಧಿಸಲು ಈ ತಿದ್ದುಪಡಿ ಮಸೂದೆಯು ಅವಕಾಶ ಮಾಡಿಕೊಡುತ್ತದೆ. ಈ ಸಿಬ್ಬಂದಿಯ ಕರ್ತವ್ಯಕ್ಕೆ ಸಂಬಂಧಿಸಿದಂತೆ ನೇರವಾಗಿ ಅಥವಾ ಸಾಮಾಜಿಕ ಜಾಲತಾಣಗಳ ಮೂಲಕ ಅವಹೇಳನ ಮಾಡುವುದು, ಆಡಿಯೊ ಅಥವಾ ವಿಡಿಯೊ ರೆಕಾರ್ಡಿಂಗ್‌ ಮಾಡುವುದು, ನಿಂದಿಸುವಂತಹ ಪದ/ಚಿತ್ರಗಳನ್ನು ಬಳಸುವುದನ್ನು ಈ ಮಸೂದೆಯು ನಿಷೇಧಿಸುತ್ತದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.