ಬೆಂಗಳೂರು: ‘ಕೊಪ್ಪಳ ಜಿಲ್ಲೆಯ ಗಂಗಾವತಿ, ಮುನಿರಾಬಾದ್ ಮತ್ತು ಬಾನಾಪುರ ರೈಲ್ವೆ ನಿಲ್ದಾಣಗಳಿಗೆ ಕ್ರಮವಾಗಿ ಅಂಜನಾದ್ರಿ (ಕಿಷ್ಕಿಂಧಾ), ಹುಲಿಗೆಮ್ಮ ದೇವಿ ಮತ್ತು ಮಹಾತ್ಮ ಗಾಂಧಿ ರೈಲು ನಿಲ್ದಾಣ ಎಂದು ಮರುನಾಮಕರಣ ಮಾಡಬೇಕೆಂದು ಶಿಫಾರಸು ಮಾಡಲಾಗಿದೆ’ ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ ತಿಳಿಸಿದ್ದಾರೆ.
ಈ ಬಗ್ಗೆ ಭಾನುವಾರ ಪ್ರಕಟಣೆ ನೀಡಿರುವ ಅವರು, ‘ಈ ಶಿಫಾರಸನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಳುಹಿಸಲಾಗಿದೆ. ಅವರ ಮೂಲಕ ಕೇಂದ್ರ ಗೃಹ ಸಚಿವಾಲಯಕ್ಕೆ ಕಳುಹಿಸಿ ಕೊಡಲಾಗುವುದು’ ಎಂದಿದ್ದಾರೆ.
‘ಕಲ್ಯಾಣ ಕರ್ನಾಟಕ ಭಾಗದಲ್ಲಿ ಬರುವ ಈ ಮೂರು ನಿಲ್ದಾಣಗಳಿಗೆ ಮರುನಾಮಕರಣ ಮಾಡುವುದರ ಹಿಂದೆ ಜನರ ಭಾವನೆಗಳಿಗೆ ಮನ್ನಣೆ ನೀಡಿದಂತೆ ಆಗುತ್ತದೆ. ಅಂಜನಾದ್ರಿಯು ರಾಮಾಯಣದಲ್ಲಿ ಬರುವ ಆಂಜನೇಯನ ಜನ್ಮಸ್ಥಳವಾಗಿದ್ದು, ಹುಲಿಗೆಮ್ಮದೇವಿ ಈ ಭಾಗದ ಜನಪ್ರಿಯ ಜನಪದ ದೇವತೆ. ಮಹಾತ್ಮ ಗಾಂಧಿ ಅವರ ಹೆಸರಿಡುವುದರ ಹಿಂದೆ ಕೂಡ ಐತಿಹಾಸಿಕ ಕಾರಣವಿದೆ’ ಎಂದು ಅವರು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.