ADVERTISEMENT

‘ಜನಪ್ರಿಯ ಯೋಜನೆಗಳಿಗೆ ಕತ್ತರಿ ಇಲ್ಲ’

ಕಿಸಾನ್ ಸಮ್ಮಾನ್‌ಗೆ ತುರ್ತು ಪರಿಹಾರ ನಿಧಿ ಬಳಕೆ

​ಪ್ರಜಾವಾಣಿ ವಾರ್ತೆ
Published 17 ಆಗಸ್ಟ್ 2019, 20:15 IST
Last Updated 17 ಆಗಸ್ಟ್ 2019, 20:15 IST
..
..   

ಬೆಂಗಳೂರು: ‘ಅನ್ನಭಾಗ್ಯ’ವೂ ಸೇರಿದಂತೆ ವಿವಿಧ ಯೋಜನೆಗಳಿಗೆ ‘ಕತ್ತರಿ’ ಹಾಕಿ ಕಿಸಾನ್‌ ಸಮ್ಮಾನ್‌ ಯೋಜನೆಗೆ ಹಣ ಹೊಂದಿಸುವ ಅಧಿಕಾರಿಗಳ ಪ್ರಸ್ತಾವನೆಗೆ ಕಾಂಗ್ರೆಸ್‌ ನಾಯಕರಿಂದ ತೀವ್ರ ಪ್ರತಿರೋಧ ವ್ಯಕ್ತವಾದ ಬೆನ್ನಲ್ಲೇ ಯಾವುದೇ ಜನಪ್ರಿಯ ಯೋಜನೆ ಗಳನ್ನೂ ರದ್ದುಪಡಿಸುವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.

ಯಾವ, ಯಾವ ಯೋಜನೆಗಳಿಂದ ಹಣ ಉಳಿತಾಯ ಮಾಡಿ ಅದನ್ನು ಕಿಸಾನ್‌ ಸಮ್ಮಾನ್‌ ಯೋಜನೆಗೆ ಬಳಸಬಹುದು ಎಂದು ಅಧಿಕಾರಿಗಳು ಮುಖ್ಯಮಂತ್ರಿಗೆ ಪ್ರಸ್ತಾವನೆ ಸಲ್ಲಿಸಿದ್ದರು.

‘ನಮ್ಮ ಸರ್ಕಾರ ಆರಂಭಿಸಿದ ಯೋಜನೆಗಳನ್ನು ರದ್ದು ಮಾಡಿದರೆ ಹೋರಾಟ ನಡೆಸಬೇಕಾದಿತು’ ಎಂದು ಕಾಂಗ್ರೆಸ್‌ ನಾಯಕರಾದ ಸಿದ್ದರಾಮಯ್ಯ, ದಿನೇಶ್‌ ಗುಂಡೂರಾವ್‌, ಜಿ.ಪರಮೇಶ್ವರ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದರು.

ADVERTISEMENT

‘ಅನ್ನಭಾಗ್ಯ ಯೋಜನೆಗೆ ಅನುದಾನ ಬಿಡುಗಡೆ ಕಡತಕ್ಕೆ ಈಗಾಗಲೇ ಸಹಿ ಮಾಡಲಾಗಿದೆ’ ಎಂದು ಸಿ.ಎಂ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.