ಬಸವಕಲ್ಯಾಣ (ಬೀದರ್ ಜಿಲ್ಲೆ): ವಿಶ್ವ ಬಸವಧರ್ಮ ವಿಶ್ವಸ್ಥ ಮಂಡಳಿಯ ಪ್ರಸಕ್ತ ಸಾಲಿನ ‘ಡಾ.ಚನ್ನಬಸವ ಪಟ್ಟದ್ದೇವರು ಅನುಭವ ಮಂಟಪ ಪ್ರಶಸ್ತಿ’ಗೆ ನಿವೃತ್ತ ನ್ಯಾಯಮೂರ್ತಿ ಶಿವರಾಜ ಪಾಟೀಲ ಅವರನ್ನು ಆಯ್ಕೆ ಮಾಡಲಾಗಿದೆ.
ರಾಯಚೂರು ಜಿಲ್ಲೆಯವರಾದ ಇವರು ರಾಷ್ಟ್ರೀಯ ಮಾನವ ಹಕ್ಕುಗಳ ಅಧ್ಯಕ್ಷರೂ ಆಗಿದ್ದರು. ಪ್ರಶಸ್ತಿಯು ₹1 ಲಕ್ಷ ನಗದು ಹಾಗೂ ಫಲಕ ಒಳಗೊಂಡಿದೆ. ವಿಶ್ವಸ್ಥ ಮಂಡಳಿ ಅಧ್ಯಕ್ಷ ಬಸವಲಿಂಗ ಪಟ್ಟದ್ದೇವರ ನೇತೃತ್ವದ ಸಮಿತಿಯು ಪ್ರಶಸ್ತಿಗೆ ಆಯ್ಕೆ ಮಾಡಿದೆ. ನ.25ರಂದು ನಡೆಯುವ ಅನುಭವ ಮಂಟಪ ಉತ್ಸವದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಮಂಡಳಿ ಕಾರ್ಯದರ್ಶಿ ಡಾ.ಎಸ್.ಬಿ.ದುರ್ಗೆ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.