ಬೆಂಗಳೂರು: ವಿಧಾನ ಪರಿಷತ್‌ನ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿಯಾಗಿ ಜೆಡಿಎಸ್ ಮುಖಂಡ ಎ.ಪಿ. ರಂಗನಾಥ್ ಸೋಮವಾರ ( ಜನವರಿ 29) ನಾಮಪತ್ರ ಸಲ್ಲಿಸಿದರು.
ಎರಡೂ ಪಕ್ಷಗಳ ಮುಖಂಡರೊಂದಿಗೆ ಬೆಂಗಳೂರು ಪ್ರಾದೇಶಿಕ ಆಯುಕ್ತರಿಗೆ ನಾಮಪತ್ರ ಸಲ್ಲಿಸಿದರು.
ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ, ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ. ದೇವೇಗೌಡ, ವಿಧಾನ ಪರಿಷತ್ ಸದಸ್ಯ ಟಿ.ಎ ಶರವಣ ಮತ್ತು ಬಿಜೆಪಿ ಶಾಸಕ ಡಾ.ಸಿ.ಎನ್. ಅಶ್ವತ್ಥ ನಾರಾಯಣ ಅವರು ನಾಮಪತ್ರ ಸಲ್ಲಿಕೆ ವೇಳೆ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.