ಬೆಂಗಳೂರು: ದೇಶದಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸಂಘಟನೆಯನ್ನು ನಿಷೇಧಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿರುವುದುಸ್ವಾಗತಾರ್ಹ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಪಿಎಫ್‌ಐ ನಿಷೇಧಿಸಿ ಕೇಂದ್ರ ಹೊರಡಿಸಿರುವ ಆದೇಶವನ್ನು ನಾನು ಸ್ವಾಗತಿಸುತ್ತೇನೆ. ದೇಶದಲ್ಲಿ ಭಯೋತ್ಪಾದಕ ಕೃತ್ಯಗಳಿಗೆ ನೆರವು ನೀಡುತ್ತಿರುವ ಕೋಮುವಾದಿ ಪಿಎಫ್‌ಐ ಮತ್ತು ಅದರ ಇತರ ಅಂಗ ಸಂಸ್ಥೆಗಳ ವಿರುದ್ಧ ಕೇಂದ್ರ ಸರ್ಕಾರ ಸೂಕ್ತ ಕ್ರಮ ಕೈಗೊಂಡಿದೆ ಎಂದು ತಿಳಿಸಿದ್ದಾರೆ.
ಪಿಎಫ್‌ಐ ಹಾಗೂಅದರ ಅಂಗ ಸಂಸ್ಥೆಗಳನ್ನು ಕಾನೂನುಬಾಹಿರ ಸಂಘಟನೆ ಎಂದು ಘೋಷಿಸಲಾಗಿದ್ದು, ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಐದು ವರ್ಷಗಳ ಅವಧಿಗೆ ನಿಷೇಧವಿಧಿಸಲಾಗಿದೆ ಎಂದು ಕೇಂದ್ರ ಗೃಹ ಇಲಾಖೆ ತಿಳಿಸಿದೆ.
ಪಿಎಫ್‌ಐ ಮತ್ತು ಅದರ ಅಂಗ ಸಂಸ್ಥೆಗಳಾದ ರಿಹಾಬ್ ಇಂಡಿಯಾ ಫೌಂಡೇಶನ್ (ಆರ್‌ಐಎಫ್), ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ (ಸಿಎಫ್ಐ), ಆಲ್ ಇಂಡಿಯಾ ಇಮಾಮ್ಸ್ ಕೌನ್ಸಿಲ್ (ಎಐಐಸಿ), ಎನ್‌ಸಿಎಚ್‌ಆರ್‌ಒ, ನ್ಯಾಷನಲ್ ವುಮೆನ್ಸ್ ಫ್ರಂಟ್ (ಎನ್‌ಡಬ್ಲ್ಯೂಎಫ್), ಜೂನಿಯರ್ ಫ್ರಂಟ್, ಎಂಪವರ್ ಇಂಡಿಯಾ ಫೌಂಡೇಶನ್ ಸೇರಿದಂತೆ ಎಂಟು ಸಂಘಟನೆಗಳನ್ನು ನಿಷೇಧಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.