ಮೈಸೂರು: ‘ಗೋರಕ್ಷಕರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಬಾರದು ಎಂಬ ಅಂಶ ಗೋಹತ್ಯೆ ನಿಷೇಧ ಮಸೂದೆಯಲ್ಲಿದೆ. ಹಾಗಾದರೆ, ಗೋರಕ್ಷಕರು ಪೊಲೀಸ್ ಹಾಗೂ ನ್ಯಾಯಾಂಗ ವ್ಯವಸ್ಥೆಗೂ ಅತೀತರಾ’ ಎಂದು ಸಾಹಿತಿ ಅರವಿಂದ ಮಾಲಗತ್ತಿ ಪ್ರಶ್ನಿಸಿದರು.
ಮೈಸೂರು ಶರಣ ಮಂಡಲಿ ವತಿಯಿಂದ ಶನಿವಾರ ಇಲ್ಲಿ ಆಯೋಜಿಸಿದ್ದ ‘ಕನಕರತ್ನ ಪ್ರಶಸ್ತಿ’ ಪ್ರದಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
‘ಈ ಅಂಶವು ಪೊಲೀಸ್ ಹಾಗೂ ನ್ಯಾಯಾಂಗ ವ್ಯವಸ್ಥೆಗೆ ಮಾತ್ರವಲ್ಲ; ಪ್ರಜಾಪ್ರಭುತ್ವಕ್ಕೆ ಮಾಡಿದ ಅಪಮಾನದಂತಿದೆ. ಹಾಗಿದ್ದರೆ, ಸರ್ಕಾರಕ್ಕೆ ಪೊಲೀಸರ ಮೇಲೆ ನಂಬಿಕೆ ಇಲ್ಲವೇ?’ ಎಂದು ಕೇಳಿದ ಅವರು, ಗೋರಕ್ಷಣೆಯ ಹೆಸರಿನಲ್ಲಿ ನೈತಿಕ ಪೊಲೀಸ್‌ಗಿರಿ ನಡೆಸುವವರ ರಕ್ಷಣೆಗೆ ಮುಂದಾಗಿರುವುದು ಸರಿಯಲ್ಲ ಎಂದು ಟೀಕಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.