ಬೆಂಗಳೂರು: ಭಾರತೀಯ ಸೇನೆಯಿಂದ ರಾಜ್ಯ ಮಟ್ಟದ ಸೇನಾ ನೇಮಕಾತಿ ರ್‍ಯಾಲಿ ಡಿ.15ರಿಂದ 23ರವರೆಗೆ ಜಯನಗರದ ಕಿತ್ತೂರು ರಾಣಿ ಚೆನ್ನಮ್ಮ ಆಟದ ಮೈದಾನದಲ್ಲಿ ನಡೆಯಲಿದೆ.
ಬೆಂಗಳೂರು ದಕ್ಷಿಣ ಉಪವಿಭಾಗಾಧಿಕಾರಿ ಕಚೇರಿಯಲ್ಲಿ ಪೂರ್ವಭಾವಿ ಸಭೆ ಶುಕ್ರವಾರ ನಡೆಯಿತು. ಸೈನಿಕ ಕಲ್ಯಾಣ ಇಲಾಖೆ, ಬಿಬಿಎಂಪಿ, ಬೆಸ್ಕಾಂ, ಜಲಮಂಡಳಿ, ಪೊಲೀಸ್, ಆರೋಗ್ಯ, ಅಗ್ನಿಶಾಮಕ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿ ಪೂರ್ವ ಸಿದ್ಧತೆ ಬಗ್ಗೆ ಚರ್ಚೆ ನಡೆಸಿದರು.
’ಒಟ್ಟು 2 ಸಾವಿರ ಜನರನ್ನು ನೇಮಕ ಮಾಡಿಕೊಳ್ಳಲು ಈ ರ್‍ಯಾಲಿ ಆಯೋಜಿಸಲಾಗಿದೆ. ನೇಮಕಾತಿಯಲ್ಲಿ ಪಾಲ್ಗೊಳ್ಳಲು ಬಯಸುವವರು ಈಗಾಗಲೇ ನೋಂದಣಿ ಮಾಡಿಕೊಳ್ಳುತ್ತಿದ್ದಾರೆ. ದಿನಕ್ಕೆ 2 ಸಾವಿರ ಮಂದಿ ದೈಹಿಕ ಪರೀಕ್ಷೆಯಲ್ಲಿ ಭಾಗವಹಿಸಲು ಅನುಕೂಲ ಆಗುವಂತೆ ವ್ಯವಸ್ಥೆ ಮಾಡಲಾಗುತ್ತಿದೆ’ ಎಂದು ಉಪವಿಭಾಗಾಧಿಕಾರಿ ಡಾ.ಶಿವಣ್ಣ ತಿಳಿಸಿದರು.
‘ಆಟದ ಮೈದಾನದಲ್ಲಿ ಶೌಚಾಲಯ ವ್ಯವಸ್ಥೆ, ಮೈದಾನ ಅಣಿಗೊಳಿಸುವ ಜವಾಬ್ದಾರಿ ಬಿಬಿಎಂಪಿಗೆ ವಹಿಸಲಾಗಿದೆ. ಅಗತ್ಯ ವಿದ್ಯುತ್ ಪೂರೈಕೆ ಹೊಣೆ ಬೆಸ್ಕಾಂಗೆ... ಹೀಗೆ ಎಲ್ಲ ಇಲಾಖೆಗಳಿಗೆ ಜವಾಬ್ದಾರಿ ಹಂಚಿಕೆ ಮಾಡಲಾಗಿದೆ. ಇದು ಎರಡನೇ ಪೂರ್ವಭಾವಿ ಸಭೆಯಾಗಿದ್ದು, ಡಿ.7ರಂದು ಮೂರನೇ ಸಭೆ ನಡೆಯಲಿದೆ’ ಎಂದು ವಿವರಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.