ಬೆಂಗಳೂರು: ಬ್ರಾಹ್ಮಣ ಹೆಣ್ಣು ಮಕ್ಕಳ ಅಂತರ್ಜಾತಿ ವಿವಾಹದ ಕುರಿತು ಪೇಜಾವರ ಮಠದ ವಿಶ್ವಪ್ರಸನ್ನತೀರ್ಥರು ನೀಡಿದ್ದ ಹೇಳಿಕೆಯನ್ನು ರಾಮೋಹಳ್ಳಿಯ ಶ್ರೀ ಸಿದ್ಧಾರೂಢ ಮಿಷನ್ ಆಶ್ರಮದ ಅಧ್ಯಕ್ಷ ಆರೂಢಭಾರತೀ ಸ್ವಾಮೀಜಿ ಖಂಡಿಸಿದ್ದಾರೆ.
‘ಹಿಂದೂ ಧರ್ಮದಲ್ಲಿ ಚಾತುರ್ವರ್ಣ ವ್ಯವಸ್ಥೆಯನ್ನು ಜೀವಂತವಾಗಿಡುವ ಹುನ್ನಾರ ಇದಾಗಿದೆ. ಜಾತಿ ನಿರ್ಮೂಲನೆಯಿಂದ ಮಾತ್ರ ಹಿಂದೂ ಸಮಾಜವನ್ನು ಒಗ್ಗೂಡಿಸಲು ಸಾಧ್ಯ. ಈ ಉದ್ದೇಶದಿಂದಲೇ ಗೋಕಾಕ್‌ನ ಮಣ್ಣೀಕೆರಿಯಲ್ಲಿ ಅಂತರ್ಜಾತಿ
ವಿವಾಹ ಪ್ರೋತ್ಸಾಹಕ ಸಂಘ ಸ್ಥಾಪಿಸಲಾಗಿದೆ’ ಎಂದು ಆರೂಢಭಾರತೀ ಸ್ವಾಮೀಜಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
‘ಬ್ರಾಹ್ಮಣ ಹೆಣ್ಣು ಮಕ್ಕಳು ಇತರೆ ಜಾತಿ, ಧರ್ಮದ ಯುವಕರನ್ನು ವರಿಸುತ್ತಿರುವ ಕುರಿತು ಗಂಭೀರ ಚಿಂತನೆಯ ಅಗತ್ಯವಿದೆ. ಇಂತಹ ಪ್ರಕರಣಗಳ ತಡೆಗೆ ಕುಟುಂಬದ ಹಿರಿಯರನ್ನು ಒಳಗೊಂಡ ಮಾತೃಮಂಡಳಿ ರಚಿಸಬೇಕು’ ಎಂದು ವಿಶ್ವಪ್ರಸನ್ನತೀರ್ಥರು ಇತ್ತೀಚೆಗೆ ಹೇಳಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.