ಬೆಂಗಳೂರು: ಜಾತಿ ನಿಂದನೆ ಹಾಗೂ ಜೀವ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಶಾಸಕ ಮುನಿರತ್ನ ಅವರಿಗೆ ವಿಚಾರಣೆ ವೇಳೆ ತೀವ್ರ ಎದೆನೋವು ಕಾಣಿಸಿಕೊಂಡಿದ್ದು, ಸೋಮವಾರ ರಾತ್ರಿ ಜಯದೇವ ಆಸ್ಪತ್ರೆಗೆ ದಾಖಲಿಸಲಾಗಿದೆ.
‘ಎರಡನೇ ದಿನದ ವಿಚಾರಣೆ ವೇಳೆ ಸೋಮವಾರ ಸಂಜೆ ನಾಲ್ಕು ಗಂಟೆ ಸುಮಾರಿಗೆ ಎದೆನೋವು ಕಾಣಿಸಿಕೊಂಡಿತ್ತು. ಆಗ ಬೌರಿಂಗ್ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಲಾಗಿತ್ತು. ಚಿಕಿತ್ಸೆ ಬಳಿಕ ಅಶೋಕನಗರ ಠಾಣೆಗೆ ಆರೋಪಿಯನ್ನು ಕರೆ ತರಲಾಗಿತ್ತು. ಮತ್ತೆ ಆರೋಗ್ಯ ಏರುಪೇರಾಗಿದ್ದರಿಂದ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಲಾಗುತ್ತಿದೆ’ ಎಂದು ಪೊಲೀಸರು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.