ಚಿತ್ರದುರ್ಗ: ಜನಪದ ಕಲಾವಿದೆ ಅಂಕೋಲಾದ ಬಡಗೇರಿ ಗ್ರಾಮದ ಸುಕ್ರಿ ಬೊಮ್ಮಗೌಡ ಅವರಿಗೆ ಕಬೀರಾನಂದಾಶ್ರಮದಿಂದ ನೀಡಲಾಗುವ ‘ಆರೂಢಶ್ರೀ’ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಕಬೀರಾನಂದಾಶ್ರಮದ ಶಿವಲಿಂಗಾನಂದ ಸ್ವಾಮೀಜಿ ತಿಳಿಸಿದರು.
ಮಹಾಶಿವರಾತ್ರಿ ಮಹೋತ್ಸವದ ಅಂಗವಾಗಿ ಮಾರ್ಚ್ 4ರಂದು ಸಂಜೆ ನಡೆಯುವ ಸಮಾರಂಭದಲ್ಲಿ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗುವುದು. ಪ್ರಶಸ್ತಿ ₹ 25 ಸಾವಿರ ನಗದು, ಫಲಕ ಮತ್ತು ಸನ್ಮಾನ ಪತ್ರವನ್ನು ಒಳಗೊಂಡಿದೆ ಎಂದು ಮಂಗಳವಾರ
ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.
ಸಾರಾಯಿ ಸೇವನೆಯಿಂದ ಸಮುದಾಯ ನಾಶ ಎಂಬುದನ್ನು ತುಂಬಾ ಹತ್ತಿರದಿಂದ ಕಂಡಿರುವ ಅವರು, ಮಾರಾಟ ಮಾಡುವವರ ವಿರುದ್ಧ ಹೋರಾಟ ನಡೆಸಿದ್ದಾರೆ. ಸಾಮಾಜಿಕ ಕಳಕಳಿ ಹೊಂದಿರುವ ಅವರನ್ನು ಈ ಬಾರಿಯ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಸ್ವಾಮೀಜಿ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.