ADVERTISEMENT

ಸಿಎಂ ಸಿದ್ದರಾಮಯ್ಯ ಕಾನೂನು ಸಲಹೆಗಾರರಾಗಿ ವಿರಾಜಪೇಟೆ ಶಾಸಕ ಎಎಸ್‌ ಪೊನ್ನಣ್ಣ ನೇಮಕ

ಸಂಪುಟ ದರ್ಜೆ ಸಚಿವರ ಸ್ಥಾನಮಾನ

​ಪ್ರಜಾವಾಣಿ ವಾರ್ತೆ
Published 31 ಜುಲೈ 2023, 16:03 IST
Last Updated 31 ಜುಲೈ 2023, 16:03 IST
ಎ.ಎಸ್‌.ಪೊನ್ನಣ್ಣ
ಎ.ಎಸ್‌.ಪೊನ್ನಣ್ಣ   

ಬೆಂಗಳೂರು: ಕೊಡಗು ಜಿಲ್ಲೆಯ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಶಾಸಕ ಎ.ಎಸ್‌.ಪೊನ್ನಣ್ಣ ಅವರನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರನ್ನಾಗಿ ತಕ್ಷಣದಿಂದಲೇ ಜಾರಿಗೆ ಬರುವಂತೆ ನೇಮಕ ಮಾಡಿ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ.

ಸಂಪುಟ ದರ್ಜೆ ಸಚಿವರ ಸ್ಥಾನಮಾನ ಹೊಂದಿರುವ ಈ ಹುದ್ದೆಗೆ ಪೊನ್ನಣ್ಣ ಅವರ ನೇಮಕವನ್ನು ಈ ಮೊದಲೇ ಘೋಷಿಸಲಾಗಿತ್ತು. ಆದರೆ, ನೇಮಕಾತಿಗೆ ಕಾನೂನು ತಿದ್ದುಪಡಿ ಆಗಬೇಕಿದ್ದ ಕಾರಣ ಅವರು ಅಧಿಕೃತವಾಗಿ ಅಧಿಕಾರ ವಹಿಸಿಕೊಂಡಿರಲಿಲ್ಲ.  

ಹಿರಿಯ ವಕೀಲ ಮತ್ತು ವಿಧಾನ ಪರಿಷತ್‌ನ ವಿರೋಧ ಪಕ್ಷದ ನಾಯಕರೂ ಆಗಿದ್ದ ದಿವಂಗತ ಎ.ಕೆ.ಸುಬ್ಬಯ್ಯ ಅವರ ಪುತ್ರರಾದ ಪೊನ್ನಣ್ಣ ಈ ಹಿಂದೆ ಸಿದ್ದರಾಮಯ್ಯ ಮತ್ತು ಎಚ್‌.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿಗಳಾಗಿದ್ದ ಅವಧಿಯಲ್ಲಿ ಹೈಕೋರ್ಟ್‌ನ ಹೆಚ್ಚುವರಿ ಅಡ್ವೊಕೇಟ್‌ ಜನರಲ್‌ ಆಗಿ ಕಾರ್ಯ ನಿರ್ವಹಿಸಿದ್ದರು. ನಂತರ ಹೈಕೋರ್ಟ್‌ನ ಹಿರಿಯ ವಕೀಲರಾಗಿ ನಿಯೋಜಿತರಾಗಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.