ಬೆಂಗಳೂರು: ಗುವಾಹಟಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಎ.ಎಸ್.ಬೋಪಣ್ಣ ಅವರನ್ನು ನೇಮಕ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲಾಗಿದೆ.
ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯಿ ನೇತೃತ್ವದ ಕೊಲಿಜಿಯಂ ಇದೇ 9ರಂದು ನಡೆಸಿದ ಸಭೆಯಲ್ಲಿ ಈ ನಿರ್ಧಾರ ಕೈಗೊಂಡಿದೆ.
ಎ.ಎಸ್.ಬೋಪಣ್ಣ ಸೇರಿದಂತೆ ರಾಜ್ಯದ ಹಿರಿಯ ನ್ಯಾಯಮೂರ್ತಿಗಳಾದ ಎಚ್.ಜಿ.ರಮೇಶ್ ಮತ್ತು ಹುಲವಾಡಿ ಜಿ.ರಮೇಶ್ ಅವರ ಹೆಸರೂ ಕೊಲಿಜಿಯಂನಲ್ಲಿ ಪ್ರಸ್ತಾಪವಾಗಿದ್ದವು.ಬೋಪಣ್ಣ ಅವರು, 2006ರಿಂದ ಹೈಕೋರ್ಟ್ ನ್ಯಾಯಮೂರ್ತಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.