ADVERTISEMENT

ಕಾನೂನು ಆಯೋಗದ ಅಧ್ಯಕ್ಷರಾಗಿ ಅಶೋಕ ಹಿಂಚಿಗೇರಿ ನೇಮಕ

​ಪ್ರಜಾವಾಣಿ ವಾರ್ತೆ
Published 24 ಅಕ್ಟೋಬರ್ 2024, 15:43 IST
Last Updated 24 ಅಕ್ಟೋಬರ್ 2024, 15:43 IST
ಅಶೋಕ ಬಿ. ಹಿಂಚಿಗೇರಿ
ಅಶೋಕ ಬಿ. ಹಿಂಚಿಗೇರಿ   

ಬೆಂಗಳೂರು: ರಾಜ್ಯ ಕಾನೂನು ಆಯೋಗದ ಅಧ್ಯಕ್ಷರನ್ನಾಗಿ ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಅಶೋಕ ಬಿ. ಹಿಂಚಿಗೇರಿ ಅವರನ್ನು ನೇಮಿಸಿ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ.

ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆಗೆ ಅಶೋಕ ಬಿ. ಹಿಂಚಿಗೇರಿ ಅವರ ಅಧಿಕಾರ ಅವಧಿ ಇರಲಿದೆ ಎಂದು ಕಾನೂನು ಇಲಾಖೆ ತಿಳಿಸಿದೆ.

ಕಾನೂನು ಆಯೋಗದ ಅಧ್ಯಕ್ಷರಾಗಿದ್ದ ಎಸ್‌.ಆರ್‌. ಬನ್ನೂರ್‌ಮಠ ಅವರ ಐದು ವರ್ಷಗಳ ಅಧಿಕಾರ ಅವಧಿ ಸೆ. 19ಕ್ಕೆ ಅಂತ್ಯವಾಗಿತ್ತು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.