ADVERTISEMENT

ಉದಯನಿಧಿ ವಜಾ: ಅಶ್ವತ್ಥನಾರಾಯಣ ಒತ್ತಾಯ

​ಪ್ರಜಾವಾಣಿ ವಾರ್ತೆ
Published 3 ಸೆಪ್ಟೆಂಬರ್ 2023, 15:41 IST
Last Updated 3 ಸೆಪ್ಟೆಂಬರ್ 2023, 15:41 IST
   

ಬೆಂಗಳೂರು: ಸನಾತನ ಧರ್ಮ ನಿರ್ಮೂಲನೆ ಆಗಬೇಕು ಎಂದು ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್‌ ಹೇಳಿಕೆ ನೀಡಿದ್ದಾರೆ. ದುರಹಂಕಾರದಿಂದ ಹೇಳಿಕೆ ನೀಡಿರುವ ಅವರನ್ನು ಸಚಿವ ಸ್ಥಾನದಿಂದಲೇ ಉಚ್ಚಾಟಿಸಬೇಕು ಎಂದು ಬಿಜೆಪಿ ಶಾಸಕ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಒತ್ತಾಯಿಸಿದ್ದಾರೆ.

ಈ ಕುರಿತು ಸುದ್ದಿಗಾರರ ಜತೆ ಮಾತನಾಡಿರುವ ಅವರು, ಉದಯನಿಧಿ ಹೇಳಿಕೆ ಅಜ್ಞಾನದಿಂದ ಕೂಡಿದೆ.  ಇಂತಹ ದ್ವೇಷಕಾರಿ ಹೇಳಿಕೆ ನೀಡಿದ್ದಕ್ಕಾಗಿ ಅವರು ದೇಶದ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT