ರಾಮನಗರ: ರಾಜ್ಯ ಸರ್ಕಾರ ಎರಡು ವರ್ಷ ಪೂರೈಸಿದ ಸಂಭ್ರಮಾಚರಣೆಗೆ ಸಿದ್ಧತೆ ನಡೆಸಿದ್ದು, ಮುಖ್ಯಮಂತ್ರಿ ಬದಲಾವಣೆ ಪ್ರಶ್ನೆಯೇ ಇಲ್ಲ ಎಂದು ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ಸ್ಪಷ್ಟಪಡಿಸಿದರು.
ಇದೇ 25 ಅಥವಾ 26ರಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರಾಜೀನಾಮೆ ನೀಡಲಿದ್ದಾರೆ ಎಂಬ ಸುದ್ದಿ ಕುರಿತು ಅವರು ಪತ್ರಕರ್ತರಿಗೆ ಪ್ರತಿಕ್ರಿಯೆ ನೀಡಿದರು. 'ಇದೆಲ್ಲ ಬರೀ ವದಂತಿ. ಆ ರೀತಿಯ ಯಾವುದೇ ಪ್ರಸ್ತಾವ ಪಕ್ಷದ ನಾಯಕರ ಮುಂದೆ ಇಲ್ಲ. ಮುಂದಿನ ಎರಡು ವರ್ಷವೂ ಯಡಿಯೂರಪ್ಪ ಅವರೇ ಸಿ.ಎಂ. ಆಗಿ ಮುಂದುವರಿಯಲಿದ್ದಾರೆ' ಎಂದರು.
ನಳಿನ್ ಕುಮಾರ್ ಕಟೀಲ್ ಅವರದ್ದು ಎನ್ನಲಾದ ಆಡಿಯೊ ನಕಲಿ. ಈ ಬಗ್ಗೆ ಅವರೇ ಸ್ಪಷ್ಟನೆ ನೀಡಿದ್ದಾರೆ ಎಂದು ಡಿಸಿಎಂ ಪ್ರತಿಕ್ರಿಯಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.