ಧಾರವಾಡ: ಸ್ವರ ಸಾಮ್ರಾಟ ಪಂಡಿತ ಬಸವರಾಜ ರಾಜಗುರು ರಾಷ್ಟ್ರೀಯ ಸ್ಮಾರಕ ಟ್ರಸ್ಟ್ ನೀಡುವ ಪಂಡಿತ ಬಸವರಾಜ ರಾಜಗುರು ರಾಷ್ಟ್ರೀಯ ಪ್ರಶಸ್ತಿಗೆ ಮುಂಬೈನ ಸಂಗೀತ ಕಲಾವಿದೆ ಅಶ್ವಿನಿ ಭಿಡೆ ದೇಶಪಾಂಡೆ, ಯುವ ಪ್ರಶಸ್ತಿಗೆ ಧಾರವಾಡದ ತಬಲಾ ವಾದಕ ಉದಯ ಕುಲಕರ್ಣಿ ಹಾಗೂ ಬೆಂಗಳೂರಿನ ಗಾಯಕ ಇಮಾನ ದಾಸ್ ಅವರನ್ನು ಆಯ್ಕೆ ಮಾಡಲಾಗಿದೆ.
ಪಂಡಿತ ಬಸವರಾಜ ರಾಜಗುರು ರಾಷ್ಟ್ರೀಯ ಪ್ರಶಸ್ತಿ ₹ 1 ಲಕ್ಷ ನಗದು, ಯುವಪ್ರಶಸ್ತಿ ತಲಾ ₹ 25 ಸಾವಿರ ನಗದು ಪುರಸ್ಕಾರ ಒಳಗೊಂಡಿದೆ. ನಗರದ ಆಲೂರು ವೆಂಕಟರಾವ್ ಸಾಂಸ್ಕೃತಿಕ ಭವನದಲ್ಲಿ ಆ. 24ರಂದು ಜರುಗುವ ಪಂಡಿತ ಬಸವರಾಜ ರಾಜಗುರು ಅವರ 103ನೇ ಜನ್ಮದಿನಾಚರಣೆಯಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಟ್ರಸ್ಟ್ ಸದಸ್ಯ ಕಾರ್ಯದರ್ಶಿ ಕುಮಾರ ಬೆಕ್ಕೇರಿ ತಿಳಿಸಿದ್ದಾರೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.