ಬೆಂಗಳೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ 26 ಬೋಧನಾ ವಿಷಯಗಳ 1,242 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ಅಂತಿಮ ನೇಮಕಾತಿ ಪಟ್ಟಿ ಪ್ರಕಟಿಸಲಾಗಿದೆ.
ಮುಂದಿನ ಪ್ರಕ್ರಿಯೆಗಳಿಗೆ ಅನುಕೂಲವಾಗುವಂತೆ ಪಟ್ಟಿಯನ್ನು ಮಾರ್ಚ್ 6ರಂದು ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್. ರಮ್ಯಾ ಮಾಹಿತಿ ನೀಡಿದ್ದಾರೆ.
ಅಂತಿಮ ಪಟ್ಟಿಯಲ್ಲಿ 1,209 ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ. ಉಳಿದ 33 ಹುದ್ದೆಗಳಿಗೆ ಮೀಸಲಾತಿ ನಿಯಮಗಳ ಪ್ರಕಾರ ಸೂಕ್ತ ಅಭ್ಯರ್ಥಿಗಳು ಲಭ್ಯವಾಗಿಲ್ಲ. ಹಾಗಾಗಿ, ಈ ಹುದ್ದೆಗಳನ್ನು ಖಾಲಿ ಬಿಡಲಾಗಿದೆ.
ಜೀವ ರಸಾಯನಶಾಸ್ತ್ರ, ಸಸ್ಯಶಾಸ್ತ್ರ, ರಸಾಯನಶಾಸ್ತ್ರ, ಕಂಪ್ಯೂಟರ್ ಸೈನ್ಸ್, ಅರ್ಥಶಾಸ್ತ್ರ, ಫ್ಯಾಶನ್ ತಂತ್ರಜ್ಞಾನ, ಹಿಂದಿ, ಇತಿಹಾಸ, ಗಣಿತ, ಮೈಕ್ರೋಬಯಾಲಜಿ, ಭೌತಶಾಸ್ತ್ರ, ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ಉರ್ದು ವಿಷಯದಲ್ಲಿ ಹುದ್ದೆಗಳು ಖಾಲಿ ಉಳಿದಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.