ಮೈಸೂರು: ‘ಒಕ್ಕಲಿಗರು ಸಂಸ್ಕೃತಿ ಹೀನ ಪಶುಗಳು ಎಂದು ರಾಷ್ಟ್ರಕವಿ ಕುವೆಂಪು ಹೇಳಿದ್ದರು’ ಎಂದು ವಿಚಾರವಾದಿ ಕೆ.ಎಸ್. ಭಗವಾನ್ ಹೇಳಿದರು.
ಮಹಿಷ ದಸರಾ ಆಚರಣೆ ಸಮಿತಿಯಿಂದ ಇಲ್ಲಿನ ಪುರಭವನದ ಆವರಣದಲ್ಲಿ ಶುಕ್ರವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
‘ನಾನು ಹಿಂದೂ ಧರ್ಮವನ್ನು ಯಾವಾಗಲೋ ಬಿಟ್ಟು ಬಿಟ್ಟೆ ಎಂದು ಕುವೆಂಪು ಯಾವಾಗಲೂ ಹೇಳುತ್ತಿದ್ದರು. ಆದರೆ, ಅವರ ಶಿಷ್ಯರಿಗೆ ಅದು ಅರ್ಥವಾಗಲಿಲ್ಲ. ಆದ್ದರಿಂದಲೇ ಕುವೆಂಪು, ಒಕ್ಕಲಿಗರು ಸಂಸ್ಕೃತಿ ಹೀನ ಪಶುಗಳು ಎಂದು ಹೇಳಿದ್ದರು. ಇದು ನನ್ನ ಮಾತಲ್ಲ; ಕುವೆಂಪು ಅವರದ್ದು. ಇಲ್ಲದಿದ್ದರೆ ನನಗೆ ಹೊಡೆಯಲು ಬರುತ್ತಾರೆ. ನನ್ನನ್ನು ಕೊಂದು ಹಾಕಿ ಬಿಡುತ್ತಾರೆ. ಆದರೆ, ನಿಜ ಹೇಳಿಯೇ ಸಾಯಬೇಕು’ ಎಂದರು.
‘ಕುವೆಂಪು ಮಾತು ಅವರ ಶಿಷ್ಯರಿಗೆ ಈಗಲೂ ಅರ್ಥವಾಗಿಲ್ಲ’ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.