ಬೆಂಗಳೂರು: ಎಸ್.ಕೆ.ಎಫ್. ಕಾರ್ಮಿಕರ ಸಂಘ ನೀಡುವ ಈ ಸಾಲಿನ ‘ಪು.ತಿ.ನ. ಪುರಸ್ಕಾರ’ಕ್ಕೆ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷ ಮನು ಬಳಿಗಾರ್ ಆಯ್ಕೆಯಾಗಿದ್ದಾರೆ.
ಈ ಪ್ರಶಸ್ತಿಯು ₹ 10 ಸಾವಿರ ನಗದು ಹಾಗೂ ಫಲಕವನ್ನು ಒಳಗೊಂಡಿದೆ. ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿ ಅನುಪಮ ಸೇವೆ ಸಲ್ಲಿಸಿದವರಿಗೆ ಹಲವು ವರ್ಷಗಳಿಂದ ಈ ಪುರಸ್ಕಾರವನ್ನು ನೀಡಲಾಗುತ್ತಿದೆ.
ಕನ್ನಡ ರಾಜ್ಯೋತ್ಸವದ ಪ್ರಯುಕ್ತ ನ.1ರಂದು ಹೊಸೂರು ರಸ್ತೆಯಲ್ಲಿರುವ ಎಸ್.ಕೆ.ಎಫ್ ಕಾರ್ಖಾನೆಯ ಆವರಣದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.