ಬೆಂಗಳೂರು: ಆಯುಷ್ ಕೋರ್ಸ್‌ಗಳ ಪ್ರವೇಶಕ್ಕೆ ಕನಿಷ್ಠ ಅರ್ಹತೆಯ ಅಂಕಗಳನ್ನು ಪರಿಷ್ಕರಿಸಿರುವ ಕಾರಣ ಹೊಸದಾಗಿ ನೋಂದಣಿ, ಅರ್ಜಿ ಸಲ್ಲಿಕೆ ಹಾಗೂ ಶುಲ್ಕ ಪಾವತಿಗೆ ನ. 28ರವರೆಗೆ ಪೋರ್ಟಲ್ ತೆರೆಯಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಹೇಳಿದೆ.
ಭಾರತೀಯ ವೈದ್ಯ ಪದ್ಧತಿಯ ರಾಷ್ಟ್ರೀಯ ಆಯೋಗ ಪ್ರಸಕ್ತ ಸಾಲಿಗೆ ಆಯುಷ್ ಕೋರ್ಸ್‌ಗಳ ಪ್ರವೇಶಕ್ಕಾಗಿ ಎಲ್ಲ ವರ್ಗದ ಅಭ್ಯರ್ಥಿಗಳಿಗೆ ನೀಟ್‌ನಲ್ಲಿ ಕನಿಷ್ಠ 15 ಪರ್ಸೆಂಟೈಲ್ ನಗದಿ ಮಾಡಿದ್ದು, ಎಲ್ಲ ಅರ್ಹರಿಗೂ ಅನುಕೂಲ ಮಾಡಲು ಮತ್ತೊಮ್ಮೆ ಅವಕಾಶ ನೀಡಲಾಗಿದೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ಮಾಹಿತಿ ನೀಡಿದ್ದಾರೆ.
ತಾತ್ಕಾಲಿಕ ಸೀಟು ಹಂಚಿಕೆ ಫಲಿತಾಂಶವನ್ನು ಡಿ.2ರಂದು, ಡಿ.3ರಂದು ಅಂತಿಮ ಫಲಿತಾಂಶ ಪ್ರಕಟಿಸಲಾಗುತ್ತದೆ. ಶುಲ್ಕ ಪಾವತಿಸಿ, ಡಿ.5ರೊಳಗೆ ಕಾಲೇಜಿಗೆ ಪ್ರವೇಶ ಪಡೆಯಬಹುದು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.