ADVERTISEMENT

ಮುನಿರತ್ನ ಜಾಮೀನು ಅರ್ಜಿ: ಆದೇಶ ಕಾಯ್ದಿರಿಸಿದ ಕೋರ್ಟ್

​ಪ್ರಜಾವಾಣಿ ವಾರ್ತೆ
Published 18 ಸೆಪ್ಟೆಂಬರ್ 2024, 8:32 IST
Last Updated 18 ಸೆಪ್ಟೆಂಬರ್ 2024, 8:32 IST
<div class="paragraphs"><p> ಕೋರ್ಟ್ </p></div>

ಕೋರ್ಟ್

   

ಬೆಂಗಳೂರು: ಪರಿಶಿಷ್ಟ ಜಾತಿ ನಿಂದನೆ, ಮಹಿಳೆಯರನ್ನು ಗುರಿಯಾಗಿಸಿ ಅವಾಚ್ಯ ಶಬ್ದಗಳಿಂದ ಬೈದ ಹಾಗೂ ಗುತ್ತಿಗೆದಾರರಿಗೆ ಲಂಚಕ್ಕೆ ಬೇಡಿಕೆ ಇರಿಸಿ ಕೊಲೆ ಬೆದರಿಕೆ ಹಾಕಿದ ಆರೋಪದಡಿ ನ್ಯಾಯಾಂಗ ಬಂಧನದಲ್ಲಿರುವ ಶಾಸಕ ಮುನಿರತ್ನ ಜಾಮೀನು ಅರ್ಜಿ ವಿಚಾರಣೆ ಪೂರೈಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶವನ್ನು ಗುರುವಾರಕ್ಕೆ (ಸೆ.19) ಕಾಯ್ದಿರಿಸಿದೆ.

ಈ ಕುರಿತ ಅರ್ಜಿಯನ್ನು, ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ ಗಜಾನನ ಭಟ್ ಬುಧವಾರ ವಿಚಾರಣೆ ನಡೆಸಿದರು.

ADVERTISEMENT

ವಿಚಾರಣೆ ವೇಳೆ ಪ್ರಾಸಿಕ್ಯೂಷನ್ ಪರ ಹೆಚ್ಚುವರಿ ಅಡ್ವೊಕೇಟ್ ಜನರಲ್ ಸಿ.ಎಸ್.ಪ್ರದೀಪ್ ಕುಮಾರ್ ಆರೋಪಿಯ ಜಾಮೀನು ಅರ್ಜಿಗೆ ಸುದೀರ್ಘ ಆಕ್ಷೇಪಣೆ ಸಲ್ಲಿಸಿದರು.

ಮುನಿರತ್ನ ಪರ ಹೈಕೋರ್ಟ್ ಹಿರಿಯ ವಕೀಲ‌ ಅಶೋಕ ಹಾರನಹಳ್ಳಿ ವಾದ ಮಂಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.