ADVERTISEMENT

ಬರ: ಸಹಕಾರ ಸಂಘ ಪ್ರತಿನಿಧಿಗಳ ವಿದೇಶ ಪ್ರವಾಸಕ್ಕೆ ತಡೆ

​ಪ್ರಜಾವಾಣಿ ವಾರ್ತೆ
Published 21 ಅಕ್ಟೋಬರ್ 2023, 20:09 IST
Last Updated 21 ಅಕ್ಟೋಬರ್ 2023, 20:09 IST
<div class="paragraphs"><p>ಕೆ.ಎನ್. ರಾಜಣ್ಣ</p></div>

ಕೆ.ಎನ್. ರಾಜಣ್ಣ

   

ಬೆಂಗಳೂರು: ‘ರಾಜ್ಯದಲ್ಲಿ ಬರ ಪರಿಸ್ಥಿತಿ ಎದುರಾಗಿರುವುದರಿಂದ ಸಹಕಾರ ಸಂಘಗಳ ಪ್ರತಿನಿಧಿಗಳು, ಇಲಾಖೆಯ ಅಧಿಕಾರಿಗಳು ಸೇರಿದಂತೆ ಯಾರಿಗೂ ವಿದೇಶ ಪ್ರವಾಸಕ್ಕೆ ಅನುಮತಿ ಕೊಡುವುದಿಲ್ಲ’ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಇಲಾಖೆಯಿಂದ ವಿದೇಶ ಪ್ರವಾಸ ತೆರಳಲು ಅನೇಕ ಮಂದಿ ಪ್ರಸ್ತಾವನೆ ಸಲ್ಲಿಸಿದ್ದರು. ಆದರೆ ಸದ್ಯಕ್ಕೆ ಯಾರಿಗೂ ಅವಕಾಶ ಇಲ್ಲ’ ಎಂದರು.

ADVERTISEMENT

‘ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ಕೆಲಸ ಇಲ್ಲ. ಸಮಯ ನೋಡಿ ವಿಷಯ ಪ್ರಸ್ತಾಪಿಸಿ ಟೀಕೆ–ಟಿಪ್ಪಣಿ ಮಾಡುತ್ತಾರೆ. ಇದಕ್ಕೆಲ್ಲ ತಲೆಕೆಡಿಸಿಕೊಳ್ಳ ಬೇಕಿಲ್ಲ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

‘ಸರ್ಕಾರದಲ್ಲಿ ನನಗೆ ಗೊತ್ತಿರುವ ಪ್ರಕಾರ ಯಾವುದೇ ಗೊಂದಲಗಳಿಲ್ಲ. ಕೆಲವರು ಹೇಳಿಕೆ ನೀಡುವ ಮೂಲಕ ಅನವಶ್ಯಕ ಗೊಂದಲ ಮೂಡಿಸುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯಾವುದೇ ಕಾರಣಕ್ಕೂ ಬದಲಾಗುವುದಿಲ್ಲ. ಆದರೆ ಲೋಕಸಭಾ ಚುನಾವಣೆ ಬಳಿಕ ರಾಜ್ಯದಲ್ಲಿ ಯಾವುದೇ ಬದಲಾವಣೆ ಬೇಕಾದರೂ ಆಗಬಹುದು’ ಎಂದರು.

‘ಹಾಸನಾಂಬೆ ದೇವಾಲಯ ನ.3ರಂದು ತೆರಯಲಿದ್ದು, ಈ ಬಾರಿ 10 ಲಕ್ಷಕ್ಕೂ ಹೆಚ್ಚು ಭಕ್ತರು ಆಗಮಿಸುವ ನಿರೀಕ್ಷೆ ಇದೆ. ಜಿಲ್ಲಾಡಳಿತದಿಂದ ಎಲ್ಲ ರೀತಿಯ ವ್ಯವಸ್ಥೆ ಮಾಡಿಕೊಳ್ಳಲಾಗಿದೆ’ ಎಂದು ಹಾಸನ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ರಾಜಣ್ಣ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.