ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯ ಖಾಸಗಿ ಸಾರಿಗೆ ಸಂಘಗಳ ಒಕ್ಕೂಟ ಸೋಮವಾರ ಕರೆ ನೀಡಿದ್ದ ಬಂದ್‌ನಿಂದಾಗಿ ಏರ್‌ಪೋರ್ಟ್‌ಗೆ ತೆರಳುವ ಹಾಗೂ ಏರ್‌ಪೋರ್ಟ್‌ನಿಂದ ಆಗಮಿಸುವ ಪ್ರಯಾಣಿಕರು ತೊಂದರೆ ಅನುಭವಿಸಿದರು.
ಖಾಸಗಿ ಕ್ಯಾಬ್‌ಗಳು ಸಿಗದೆ ಬಿಎಂಟಿಸಿ ಬಸ್‌ಗಳನ್ನು ಅವಲಂಬಿಸಿದರು.
ಮಾಜಿ ಕ್ರಿಕೆಟಿಕ ಅನಿಲ್ ಕುಂಬ್ಳೆ ಅವರು ಕೂಡ ಏರ್‌ಪೋರ್ಟ್‌ನಿಂದ ಬಿಎಂಟಿಸಿ ವಾಯುವಜ್ರ ಬಸ್‌ನಲ್ಲಿ ಪ್ರಯಾಣಿಸಿದರು.
ಬಿಎಂಟಿಸಿ ಬಸ್‌ನಲ್ಲಿ ಪ್ರಯಾಣ ಮಾಡುವ ಚಿತ್ರವನ್ನು ಅವರು ತಮ್ಮ ‘ಎಕ್ಸ್’ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
‘ಏರ್‌ಪೋರ್ಟ್‌ನಿಂದ ಮನೆಗೆ ಬಿಎಂಟಿಸಿ ಬಸ್‌ನಲ್ಲಿ ಪ್ರಯಾಣ’ ಎಂದು ಬರೆದುಕೊಂಡಿದ್ದಾರೆ.
ಸಾರ್ವಜನಿಕರಿಗೆ ತಟ್ಟದ ಬಿಸಿ
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ಖಾಸಗಿ ಸಾರಿಗೆ ಸಂಘಗಳ ಒಕ್ಕೂಟ ಇಂದು ನಡೆಸುತ್ತಿರುವ ಮುಷ್ಕರ ಶಾಂತಿಯುತವಾಗಿದೆ. ಸಾರ್ವಜನಿಕರಿಗೆ ಮುಷ್ಕರದ ಬಿಸಿ ಅಷ್ಟಾಗಿ ತಟ್ಟಿಲ್ಲ.
ವಂದೇ ಭಾರತ್ ರೈಲು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣಕ್ಕೆ ಬಂದಾಗ ಅದರಿಂದ ಇಳಿದ ಪ್ರಯಾಣಿಕರಲ್ಲಿ ಕೆಲವರು ಅಟೊಗಾಗಿ ವಿಚಾರಿಸುತ್ತಿರುವುದು ಕಂಡು ಬಂತು. ಬಹುತೇಕ ಕಡೆಗಳಲ್ಲಿ ಜನರು ಸ್ವಂತ ವಾಹನ ಇಲ್ಲವೇ ಬಿಎಂಟಿಸಿ ಬಸ್ ಗಳನ್ನೇ ಅವಲಂಬಿಸಿದ್ದರಿಂದ ಸಮಸ್ಯೆಗಳಾಗಿಲ್ಲ. ಎಲ್ಲೂ ಜನ ದಟ್ಟಣೆ ಉಂಟಾಗಿಲ್ಲ.
ಮುಷ್ಕರಕ್ಕೆ ಬೆಂಬಲ ನೀಡಿರುವ ವಿವಿಧ ಸಂಘಟನೆಗಳು ಅಲ್ಲಲ್ಲಿ ಪಾದಯಾತ್ರೆ ನಡೆಸಿದರು. ಬಳಿಕ ಸ್ವಾತಂತ್ರ್ಯ ಉದ್ಯಾನದ ಕಡೆಗೆ ಸಾಗಿದರು
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.