ADVERTISEMENT

ವಿಧಾನ ಪರಿಷತ್‌ಗೆ ಬಸನಗೌಡ ಬಾದರ್ಲಿ ಆಯ್ಕೆ

​ಪ್ರಜಾವಾಣಿ ವಾರ್ತೆ
Published 5 ಜುಲೈ 2024, 15:46 IST
Last Updated 5 ಜುಲೈ 2024, 15:46 IST
ಬಸನಗೌಡ ಬಾದರ್ಲಿ
ಬಸನಗೌಡ ಬಾದರ್ಲಿ   

ಬೆಂಗಳೂರು: ಕಾಂಗ್ರೆಸ್‌ನ ಬಸನಗೌಡ ಬಾದರ್ಲಿ ಅವರು ವಿಧಾನ ಪರಿಷತ್‌ ಸದಸ್ಯರಾಗಿ ಅವಿರೋಧ ಆಯ್ಕೆಯಾಗಿದ್ದಾರೆ.

ಕರ್ನಾಟಕ ವಿಧಾನಸಭೆಯಿಂದ ವಿಧಾನ ಪರಿಷತ್‌ನ ಒಂದು ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಜಗದೀಶ ಶೆಟ್ಟರ್‌ ಆಯ್ಕೆಯಾಗಿದ್ದರು. ಲೋಕಸಭೆ ಚುನಾವಣೆ ವೇಳೆ ಕಾಂಗ್ರೆಸ್‌ ತೊರೆದು ಬಿಜೆಪಿ ಸೇರಿದ್ದ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ಜುಲೈ 12ಕ್ಕೆ ಉಪ ಚುನಾವಣೆ ನಿಗದಿಯಾಗಿತ್ತು. ನಾಮಪತ್ರ ಹಿಂಪಡೆಯಲು ಜುಲೈ 5 ಕೊನೆಯ ದಿನವಾಗಿದ್ದು, ರಾಯಚೂರು ಜಿಲ್ಲೆ ಸಿಂಧನೂರಿನ ಬಸನಗೌಡ ಬಾದರ್ಲಿ ಅವರೊಬ್ಬರೇ ಅಂತಿಮವಾಗಿ ಕಣದಲ್ಲಿ ಉಳಿದರು. ಅವರು ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಘೋಷಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.